ವಿವಿಧ ಶಾಲೆಗಳ 3 ಸಾವಿರ ಮಕ್ಕಳು ಭಾಗಿ
ಬೀದರ : ಶಾಲಾ ಮಕ್ಕಳು ರಸ ಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಸಮಯ ಮತ್ತು ಚಾಣಾಕ್ಷತೆಯಿಂದ ಸ್ಪರ್ಧಿಸಿ ತಮ್ಮ ಬುದ್ದಿವಂತಿಕೆಯನ್ನು ಪ್ರದರ್ಶಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಇಂದು ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಅಗಸ್ತ್ಯ ಟೆಕ್ಸಾಸ್ ಇನ್ಸೂಟ್ರೂಮೆಂಟ್ಸ್ ಸಮಗ್ರ ಶಿಕ್ಷಣ ಕರ್ನಾಟಕ-ಬೀದರ ಹಾಗೂ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರ ಬೀದರ ಸಂಯುಕ್ತಾಶ್ರಯದಲ್ಲಿ ವ್ಯಾಕೋವಾಕ್ಯಮ್ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಸ ಪ್ರಶ್ನೆ ಕಾರ್ಯಕ್ರಮದಲ್ಲಿ ಬೀದರ ತಾಲ್ಲೂಕಿನ 50 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 300 ಮಕ್ಕಳು 50 ಶಿಕ್ಷಕರು ಸೇರಿ ಒಟ್ಟು 3000 ಮಕ್ಕಳು ಈ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಅಗಸ್ತ್ಯ ಕೋರ ವಿಜ್ಞಾನ ಚಟುವಟಿಕೆಗಳ ಕೇಂದ್ರ ಕರ್ನಾಟಕದ ಪ್ರಾದೇಶಿಕ ಮುಖ್ಯಸ್ಥೆ ಗೀತಾ ಪಾಟೀಲ ಮಾತನಾಡಿ, ರಾಜ್ಯದ 19 ಜಿಲ್ಲೆಗಳಲ್ಲಿ ಅಗಸ್ತ್ಯ ಮತ್ತು ಟೆಕ್ಸಾಸ್ ಇನ್ಸೂಟ್ರೂಮೆಂಟ್ಸ್ ಸಂಸ್ಥೆ ಸಹಭಾಗಿತ್ವದಲ್ಲಿ ರಸ ಪ್ರಶ್ನೆ ಕಾರ್ಯಕ್ರಮಗಳು ನಡೆಯುತ್ತಿದ್ದು, ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಹುಬ್ಬಳ್ಳಿ, ಧಾರವಾಡ, ಕಲಬುರ್ಗಿ, ಬೀದರ ಭಾಗದಲ್ಲಿ ಸ್ಪರ್ಧೆಗಳು ನಡೆಯುತ್ತಿದ್ದು, ಮಕ್ಕಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.
ರಸ ಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾಜದ ಶಾಲೆಗಳ ವಿವರ: ಬಗದಲ್ (ಬಿಸಿ) ಮುರಾರ್ಜಿ ದೇಸಯಿ ವಸತಿ ಶಾಲೆಗೆ ಮೊದಲನೇ ಸ್ಥಾನ, ಕೋತ್ತಾಬಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡನೇ ಸ್ಥಾನ, ಜನವಾಡ (ಎ) ಆದರ್ಶ ಮಹಾವಿದ್ಯಾಲಯಕ್ಕೆ ಮೂರನೇ ಸ್ಥಾನ, ಜನವಾಡ (ಬಿ) ಆದರ್ಶ ವಿದ್ಯಾಲಯಕ್ಕೆ ನಾಲ್ಕನೇ ಸ್ಥಾನ, ಕಪಲಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಐದನೇ ಸ್ಥಾನ, ಕಪಲಾಪೂರ (ಜೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆರನೇ ಸ್ಥಾನ, ಕನಗತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಏಳನೇ ಸ್ಥಾನ ಹಾಗೂ ಗಾದಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎಂಟನೇ ಸ್ಥಾನ ಪಡೆದಿರುತ್ತವೆ.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಷ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ದೊಡ್ಡೆ, ಶಾಲಾ ಶಿಕ್ಷಣ ಇಲಾಖೆಯ ಪ್ರಭಾರಿ ಕ್ಷೇತ್ರ ಸಮನ್ವಯಾಧಿಕಾರಿ ಧನರಾಜ ಗುಡಮೆ, ಸಹಾಯಕ ಯೋಜನಾ ಸಮನ್ವಯ ಅಧಿಕಾರಿಗಳಾದ ಗುಂಡಪ್ಪ ಹುಡಗೆ, ಅಗಸ್ತö್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಕೋರ್ ವಿಜ್ಞಾನ ಚಟುವಟಿಕಾ ಮುಖ್ಯಸ್ಥ ಬಾಬುರಾವ ಎನ್.ಸಳಸಾರೆ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.