ಮುಖ್ಯಮಂತ್ರಿಗಳಿಗೆ ಕ್ಷೇತ್ರದ ಪರಿಸ್ಥಿತಿ ಬಗ್ಗೆ ಮಾಹಿತಿ |  ಹೆಚ್ಚಿನ ಪರಿಹಾರಕ್ಕೆ ಮನವಿ


ಬೀದರ : ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ಅವರು ಇಂದು ಬೀದರ ತಾಲ್ಲೂಕಿನ ಜನವಾಡ, ಹಿಪ್ಪಳಗಾಂವ, ಚಾಂಬೋಳ ಗ್ರಾಮ ಮತ್ತು ಸೇತುವೆ, ಕನಳ್ಳಿ, ಶ್ರೀಮಂಡಲ, ಕಂಗಟಿ, ಬಸಂತಪುರ , ಚಿಮಕೋಡ, ಪತೇಪೂರ, ಖಾಜಾಪೂರ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಭೇಟಿ ನಂತರ ಮಾತನಾಡಿದ ಸಚಿವರು, ಭಾರೀ ಮಳೆಯಿಂದಾಗಿ ರೈತರ ಹೊಲಗಳಲ್ಲಿ ಬೆಳಯಲಾದ ಹೆಸರು, ಉದ್ದು ಸೋಯಾಬೀನ್, ತೋಗರೆ, ಸಂಪೂರ್ಣವಾಗಿ ನಾಶವಾಗಿವೆ ಮತ್ತು ವಿವಿಧ ಸ್ಥಳಗಳಲ್ಲಿ ಅನೇಕ ಮನೆಗಳು ಕುಸಿದಿವೆ.

ಪ್ರತಿಯೊಂದು ವಿಪತ್ತು ಮತ್ತು ಹಾನಿಯ ವರದಿ ಮಾಡಲು ಮತ್ತು ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಲು ಅಂತರ ಇಲಾಖಾ ಸಮೀಕ್ಷೆಯನ್ನು ಮಾಡಲು ಅಧಿಕಾರಿಗಳಿಗೆ ನಿರ್ದೇಶಿಸಿದರು.ಬೆಳೆ ಹಾನಿ ಮತ್ತು ಮನೆ ಹಾನಿಗೆ ಎಸ್‍ಡಿಆರ್‍ಏಫ್ ಮತ್ತು ಎನ್‍ಡಿಆರ್‍ಎಫ್ ಅಡಿಯಲ್ಲಿ ತಕ್ಷಣ ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿಗಳಿಗೆ ಕ್ಷೇತ್ರದ ಪರಿಸ್ಥಿತಿ ಬಗ್ಗೆ ತಿಳಿಸಲಾಗಿದೆ ಮತ್ತು ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದರು. ಸಾರ್ವಜನಿಕ ನದಿ , ಕೆರೆಗಳಿಂದ ದೂರ ಇರಬೇಕು ಮತ್ತು ಯಾವುದೇ ಅಪಾಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ತಹಸಿಲ್ದಾರ್ ರವೀಂದ್ರ ಧಾಮಾ, ಕೃಷಿ ಇಲಾಖೆ ಉಪ ನಿರ್ದೇಶಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!