ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸುಮಾರು ವರ್ಷಗಳಿಂದ ಸಂಘಟನೆಗಳು ನಡೆಸುತ್ತಿರುವ ಹೋರಾಟದಿಂದಾಗಿ ಒಳಮೀಸಲಾತಿ ಜಾರಿ ಮಾಡಲು ಸರ್ಕಾರ ಮುಂದಡಿ ಇಟ್ಟಿದೆ.
ರಾಜ್ಯಾದಾದ್ಯಂತ ಒಳಮೀಸಲಾತಿ ಕಲ್ಪಿಸಬೇಕು ಎನ್ನುವ ಒತ್ತಾಯಗಳು ಸರ್ಕಾರದ ಮೇಲೆ ತೀವ್ರವಾಗುತ್ತಿರುವ ಹಿನ್ನೆಲೆ ಸರ್ಕಾರ ಇದೀಗ ಆಯೋಗ ರಚನೆಗೆ ಮುಂದಾಗಿದೆ.
ಏಕಸದಸ್ಯ ಆಯೋಗ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸರ್ಕಾರವು ಆಯೋಗವೊಂದನ್ನು ರಚನೆ ಮಾಡಲಿದ್ದು, ಈ ಆಯೋಗವು ಮೂರು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಕೆ ಮಾಡಲು ಸೂಚನೆ ನೀಡಲು ತೀರ್ಮಾನಿಸಲಾಗಿದೆ. ಸರ್ಕಾರದ ಕ್ರಮವು ಬಹು ವರ್ಷಗಳಿಂದ ಹೋರಾಟ ಮಾಡುತ್ತಿರುವವರಲ್ಲಿ ಭರವಸೆ ಮೂಡಿಸಿದಂತಾಗಿದೆ.