ಯಾದಗಿರಿ : ಜಿಲ್ಲೆಯ ದಂಡ ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2024ರ ನವೆಂಬರ್ 16 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯ ವರೆಗೆ 2024ರ ನವೆಂಬರ್ 17 ರಂದು ಬೆಳಿಗ್ಗೆ 10 ರಿಂದ 11.30 ಗಂಟೆಯ ವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯ ವರೆಗೆ ಪ್ರಸ್ತಾವನೆಯಲ್ಲಿ ವಿವರಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಗಳು ಸುಸೂತ್ರವಾಗಿ ನಡೆಸುವ ಹಿತದೃಷ್ಟಯಿಂದ, ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ 300 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಹಾಗೂ ಜೆರಾಕ್ಸ್ ಅಂಗಡಿಗಳು, ಪುಸ್ತಕ ಮಳಿಗೆಗಳನ್ನು ಈ ಕೆಳಕಾಣಿಸಿದ ಷರತ್ತಿಗೊಳಪಟ್ಟು ತೆರೆಯುವುದನ್ನು ನಿಷೇಧಿಸಿ ಆದೇಶವನ್ನು ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಹೊರಡಿಸಿದ್ದಾರೆ.
ಷರತ್ತುಗಳು: ಪರೀಕ್ಷಾ ಕೇಂದ್ರದ ಸುತ್ತಲೂ 300 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ, ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್, ಪುಸ್ತಕ ಮಳಿಗೆಗಳು ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ನಿಗದಿಪಡಿಸಿದ ಅಧಿಕಾರಗಳನ್ನು, ಶಿಕ್ಷಕರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವದನ್ನು ನಿಷೇಧಿಸಲಾಗಿದೆ. 300 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ.
ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.