ನಗರದ ಹೊರ ವಲಯದ ಯರಮರಸ್ ಬಳಿ ನಿರ್ಮಾಣ ಗೊಳ್ಳುತ್ತಿರುವ ವಿಮಾನ ನಿಲ್ದಾಣ | ತ್ವರಿತಗತಿಯ ಕಾಮಗಾರಿಗೆ ಸೂಚನೆ

ರಾಯಚೂರು: ಜಿಲ್ಲಾಧಿಕಾರಿ ನಿತೀಶ್ ಕೆ ಅವರು ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿಯ ಬಗ್ಗೆ ಸಮಗ್ರ ಪರಿಶೀಲಿಸಿದರು.

ಮೊದಲಿಗೆ ವಿಮಾನ ನಿಲ್ದಾಣದ ರನ್ ವೇ ಕಾಮಗಾರಿಯ ವೀಕ್ಷಣೆ ನಡೆಸಿ ಕಾಮಗಾರಿಯ ಪ್ರಗತಿಯ ಬಗ್ಗೆ ಕೇಳಿದರು. ಒಟ್ಟು 1.7 ಕಿ ಮೀ ಉದ್ದದ ರನ್ ವೇ ಪೈಕಿ ಇದುವರೆಗೆ 800 ಮೀಟರ್‌ನಷ್ಟು ರನ್ ವೆಗೆ ಮೊರಂ ಹಾಕಿದ್ದು, ಬಾಕಿ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬಳಿಕ ಜಿಲ್ಲಾಧಿಕಾರಿಗಳು, ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಕಟ್ಟಡಕ್ಕೆ ಈಗಾಗಲೇ ಕಾಲಂ ಮತ್ತು ಚೆತ್ ಹಾಕಿದ್ದು, ಈಗ ರೂಪ್ ಟ್ರಸ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇದೆ ವೇಳೆ, ಎಲೆಕ್ಟ್ರಿಕಲ್ ಸಬ್ ಸ್ಟೇಷನ್ ಬಿಲ್ಡಿಂಗ್-1 ಮತ್ತು ಬಿಲ್ಡಿಂಗ್ 2ರ ಕಾಮಗಾರಿಗಳ ಬಗ್ಗೆ ಸಹ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಈ ಎರಡು ಕಟ್ಟಡಗಳು ಪ್ಲಾಸ್ಟರ್ ಹಂತದಲ್ಲಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದರು.ಏರ್ ಟ್ರಾಪಿಕ್ ಕಂಟ್ರೋಲ್ ಬಿಲ್ಡಿಂಗ್‌ನ ಚತ್ತಿನ ಕಾಂಕ್ರಿಟ್ ಹಾಕಲಾಗುತ್ತಿದೆ. ಮತ್ತು ಒಟ್ಟು 8 ಕಿ. ಮೀಟರ್ ಪೈಕಿ 5 ಕಿ.ಮೀಟರ್ ಉದ್ದದ ಕಾಂಪೌಂಡ್ ಸುತ್ತಲಿನ ಪೆರಿಮೀಟರ್ ರೋಡ್ ಇದೀಗ ಡಬ್ಲೂö್ಯ ಎಂಎಂ ಹಂತದಲ್ಲಿದ್ದು, ಮುಂದಿನ ದಿನಗಳಲಿ ಡಾಂಬರೀಕರಣ ಮಾಡಲಾಗುವುದು. ಒಟ್ಟು 12 ಸೆಕ್ಯುರಿಟಿ ವಾಚ್ ಟವರ್ ಪೈಕಿ ಇದೀಗ 6 ಟವರ್‌ಗಳ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ. ವಿಮಾನ ನಿಲ್ದಾಣದ ಕಾಂಪೌಂಡ್ ಒಳಭಾಗದಲ್ಲಿನ ಆಂತರಿಕ ರಸ್ತೆಗಳ ನಿರ್ಮಾಣ ಕಾಮಗಾರಿಯು ಸಹ ಪ್ರಗತಿಯಲ್ಲಿದೆ. ವಿಮಾನ ನಿಲ್ದಾಣದ ಒಟ್ಟು 8 ಕಿ.ಮೀಟರ್ ಕಾಂಪೌಂಡ್ ನಿರ್ಮಾಣ ಕಾರ್ಯವು ಈಗಾಗಲೇ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಕಾಮಗಾರಿ ವೇಗಗೊಳಿಸಲು ಸೂಚನೆ: ವಿಮಾನ ನಿಲ್ದಾಣ ಕಾಮಗಾರಿಯನ್ನು ವೇಗಗೊಳಿಸಿ, ಬಾಕಿ ಉಳಿಸಿದ ಎಲ್ಲ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು, ಸಂಬಂಧಿಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ತಹಸೀಲ್ದಾರ ಸುರೇಶ ವರ್ಮಾ, ಲೋಕೋಪಯೋಗಿ ಇಲಾಖೆಯ ಅಭಿಯಂತರ ಮಹೇಶ್, ಗುತ್ತಿಗೆದಾರ ಕಂಪನಿ ಕೆಎಂವಿದ ಪ್ರತಿನಿಧಿ ಪ್ರವೀಣ್ ಇನ್ನೀತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!