ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿರಿಂದ ಉದ್ಯೋಗ ಮೇಳ ಉದ್ಘಾಟನೆ…

ದೇಶಕ್ಕೆ ತನ್ನದೇ ಅದ ಪರಂಪರೆ, ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದ್ಯೋಗವನ್ನು ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ.- ವಿ.ಸೋಮಣ್ಣ ಸಚಿವರು.

ಮೈಸೂರು:  ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು.

ಮಂಗಳವಾರ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದ್ಯೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.

ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ. ಪ್ರಧಾನಮಂತ್ರಿ ಜನ ಧನ್ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮಾನ್ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡಾವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ದಿ ಮಾಡಿದೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುದಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು.

ಕೊಡಗು ಮೈಸೂರು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ಕಳೆದ 10 ವರ್ಷಗಳಲ್ಲಿ ಮಾನ್ಯ ಪ್ರಧಾನ ಮಂತ್ರಿ ಗಳು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047ಕ್ಕೆ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ. ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಭಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್. ಎಂ. ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!