ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗಣ್ಣ ಗೋನಾಲ್ ನೇತೃತ್ವದಲ್ಲಿ ಹೋರಾಟ

ಸುರಪುರ : ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಉಪವಿಭಾಗದ ವ್ಯಾಪ್ತಿಯ ಸುರಪುರ, ಶಹಾಪುರ ಹಾಗೂ ಹುಣಸಗಿ ತಾಲೂಕುಗಳಿಗೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಸೂಕ್ತ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬುಧವಾರ ಸುರಪುರ ಡಿಎಸ್‌ಪಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.

ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುಗಳು ದಾಖಲಾಗಿದ್ದರೂ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು. ಪ್ರಕರಣಗಳನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗಣ್ಣ ಗೋನಾಲ್, “ಸಂಬಂಧಪಟ್ಟ ಪ್ರಕರಣಗಳಲ್ಲಿ 15 ದಿನಗಳ ಒಳಗಾಗಿ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಡಿಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು. ಪ್ರಕರಣಗಳ ಕುರಿತು ಇಲಾಖೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಮುಂದಿನ ಹಂತದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಧರಣಿ ಸತ್ಯಾಗ್ರಹದಲ್ಲಿ ಕ್ರಾಂತಿ ಗೀತೆ ಹಾಡುಗಾರ ಹೈದರ್ ಅಲಿ ಫಲಕನಮರಡಿ. ದಲಿತ ಸಂಘರ್ಷ ಸಮಿತಿಯ ಜಿಲ್ಲಾ.ಸಂ.ಸಂಚಾಲಕ ರಾಮಪ್ಪ ಕೋಟೆ. ಸುರಪುರ ತಾಲೂಕು ಸಂಚಾಲಕ ನಾಗರಾಜ್ ಹೋಕುಳಿ. ಶಹಾಪುರ ತಾಲೂಕು ಸಂಚಾಲಕ ಬಸವರಾಜ್ ಹೊತ್ಪೇಟ್.ಹುಣಸಗಿ ತಾಲೂಕು ಸಂಚಾಲಕ ನಿಂಗಣ್ಣ ಕಟೀಮನಿ.ಸಂ ಸಂಚಾಲಕರು ನಾಗರಾಜ್ ಗೋಗಿಕೆರ.ಗೋಪಾಲ ಗೋಗಿಕೆರ. ಭೀಮಣ್ಣ ದಿವಲ್ ಗೂಡ್ . ಭೀಮಣ್ಣ ಅಡೋಡಗಿ, ಶಿವಣ್ಣ ನಾಗರಾಳ , ಜಟ್ಟಪ್ಪ ನಾಗರಾಳ.ಭೀಮು ಕೆಂಭಾವಿ ಹೋಬಳಿ ಸಂಚಾಲಕರು. ಹಾಗೂ ಸಂಘಟನೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!