ಯಾದಗಿರಿ : ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ 2024ರ ಅಕ್ಟೋಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಯಾದಗಿರಿ ಮಿನಿ ವಿಧಾನಸೌಧ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.

ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಪೊಲೀಸ್ ಕರ್ನಾಟಕ ಲೋಕಾಯುಕ್ತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಯಾದಗಿರಿ ಜಿಲ್ಲಾ ನ್ಯಾಯಾವಾದಿಗಳ ಸಂಘ ಇವರುಗಳ ಸಹಯೋಗದೊಂದಿಗೆ ಭ್ರಷ್ಟಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಏರ್ಪಡಿಸಲಾಗಿದೆ.

ಭ್ರಷ್ಟಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಯಾದಗಿರಿ ತಾಲೂಕಿನ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!