ಮಕ್ಕಳ ಆರೋಗ್ಯ ಸುರಕ್ಷತೆ ಗೆ ಸೂಕ್ತ ಲಸಿಕೆ ಕೊಡಿಸಿ
ಯಾದಗಿರಿ: ಮಕ್ಕಳನ್ನು ವಿವಿಧ ರೋಗಗಳಿಂದ ರಕ್ಷಿಸಲು ನಿಗದಿತ ಅವಧಿಯೊಳಗೆ ಅಗತ್ಯ ಲಸಿಕೆಗಳನ್ನು ಕೊಡಿಸಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ರೀಜ್ವಾನಾ ಆಫ್ರೀನ್ ಹೇಳಿದರು.
ನಗರದ ಹಳೆ ಆಸ್ಪತ್ರೆಯಲ್ಲಿ ಶುಕ್ರವಾರ ಸಾರ್ವತ್ರಿಕ ಲಸಿಕಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗರ್ಭಿಣಿಯರು ಮತ್ತು ಮಕ್ಕಳಿಗೆ ಆರೋಗ್ಯ ಇಲಾಖೆಯ ಮಾರ್ಗಸೂಚಿ ಯಂತೆ ನಿಯಮಿತವಾಗಿ ಅಗತ್ಯ ಲಸಿಕೆಗಳನ್ನು ನೀಡುವುದರಿಂದ ತಾಯಿ ಮತ್ತು ಶಿಶು ಮರಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯವಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮಗಳ ಬಗ್ಗೆ ಸಮೀಪದ ಆರೋಗ್ಯ ಕೇಂದ್ರ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮಾಹಿತಿ ಪಡೆದು ನಿಗದಿತ ದಿನದಂದು ಲಸಿಕೆ ಪಡೆಯುವಂತೆ ಅವರು ತಿಳಿಸಿದರು.
0-5 ವರ್ಷದೊಳಗಿನ ಮಕ್ಕಳಿಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯಂತೆ ವಯಸ್ಸಿಗನು ಗುಣವಾಗಿ ಲಸಿಕೆ ಪಡೆಯಲು ಅರ್ಹರಾದ ಮತ್ತು ಲಸಿಕೆ ವಂಚಿತರಾದ ಗರ್ಭಿಣಿ ಮತ್ತು ಮಕ್ಕಳಿಗೆ ಲಸಿಕಾ ಪಡೆಯಬಹುದು ಎಂದು ಹೇಳಿದರು. ಕುಮಾರ್ ಅಂಗಡಿ, ಡಾ. ಸಚಿನ್ ಕುಮಾರ್, ಆರೋಗ್ಯ ಸಿಬ್ಬಂದಿಗಳಾದ ಪ್ರಸಾದ ಮಿತ್ರಾ, ಸಲೋಮಿ, ಶಾಂತಕುಮಾರಿ ಇದ್ದರು.