ಯಾದಗಿರಿ: ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರಿಗೆ ಸಾಮಾಜಿಕ ಕಾರ್ಯಕರ್ತೆ ರುದ್ರಾಂಬಿಕ ಆರ್. ಪಾಟೀಲ್ ರವರು ಭೇಟಿ ಮಾಡಿ ಸನ್ಮಾನಿಸಿ ಮನವಿ ಸಲ್ಲಿಸಿದ್ದಾರೆ.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಜೂಜು, ಬೆಟ್ಟಿಂಗ್ ಸೇರಿ ಅಕ್ರಮ ಚಟುವಟಿಕೆಗಳನ್ನು ತಡೆಯುವಂತೆ ಮನವಿ ಮಾಡಿದರು.
ಅಕ್ರಮ ಚಟುವಟಿಕೆಗಳ ಹಾವಳಿಯಿಂದ ಅದೇಷ್ಟೋ ಬಡ ಕುಟುಂಬಗಳ ಸಂಸಾರ ಬೀದಿಗೆ ಬಂದಿವೆ. ಹಳ್ಳಿಗಳಲ್ಲಿ ಚಹಾ ಹೋಟೆಲ್ ಕಿರಾಣಿ ಅಂಗಡಿಗಳಲ್ಲಿ ಮಧ್ಯ ಮಾರಾಟ ಮಾಡುತ್ತಿದ್ದು ಕುಡಿತದ ಚಟಕ್ಕೆ ದಾಸರಾಗುವಂತಾಗಿದೆ.
ದಿನನಿತ್ಯ ಕುಡಿದು ಬಂದು ಮಹಿಳೆಯರ ಮೇಲೆ ಹಲ್ಲೆ ದೌರ್ಜನ ಮಾಡುತ್ತಿರುವುದು ಕಂಡು ಬರುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಮಾತ್ರ ಅಕ್ರಮ ಚಟುವಟಿಕೆಗಳ ನಡೆಸುವ ವಿರುದ್ಧ ಸರಿಯಾದ ಕ್ರಮಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾನೂನು ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಕಲೆಹಾಕಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಯುವ ಹೋರಾಟಗಾರ ಶರತ್ ಅಲ್ಲಿಪುರ, ಹಣಮಂತ್ರಾಯ ಗೌಡ ತೇಕರಾಳ, ಶ್ರೀನಿವಾಸ್ ಇನ್ನಿತರರು ಇದ್ದರು.