ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಸಭೆ ಯಲ್ಲಿ ಜಿಲ್ಲಾಧಿಕಾರಿ ಸೂಚನೆ |ಅಂಗನವಾಡಿ ಕಾರ್ಯಕರ್ತೆ ಯರ, ಸಹಾಯಕಿಯರ ಹುದ್ದೆಗಳ ನೇಮಕಾತಿಯು ಪಾರದರ್ಶಕವಾಗಿ ನಡೆಸಿ

ಯಾದಗಿರಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಯರ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿ ಯು ಪಾರದರ್ಶಕವಾಗಿ ಹಾಗೂ ಮಧ್ಯವರ್ತಿಗಳು ಪಾಲ್ಗೊಳ್ಳ ದಂತೆ ಎಚ್ಚರವಹಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇ ಕೆಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ  ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿಯಿರುವ ಒಟ್ಟು 159-ಅಂಗನವಾಡಿ ಕಾರ್ಯಕರ್ತೆಯರ ಹಾಗೂ 311-ಅಂಗನವಾಡಿ ಸಹಾಯಕಿ ಯರ ಗೌರವ ಸೇವೆ ಹುದ್ದೆಗಳಿಗೆ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಪಡೆಯಲಾಗಿದ್ದು, ಈ ಅರ್ಜಿಗಳನ್ನು ಸೂಕ್ಷ್ಮವಾಗಿ ಇಲಾಖಾ ಮಾರ್ಗಸೂಚಿಗಳನ್ವಯ ಪರಿಶೀಲಿಸಿ, ಪಾರದರ್ಶಕ ವಾಗಿ ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕು. ಅಲ್ಲದೆ ನೇಮಕಾತಿಯಲ್ಲಿ ಯಾವುದೇ ರೀತಿಯ ಮಧ್ಯವರ್ತಿಗಳು ಪಾಲ್ಗೊಳ್ಳದಂತೆ ಎಚ್ಚರವಹಿಸಿಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ನೇಮಕಾತಿ ಯಲ್ಲಿ ಅಕ್ರಮಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿ ಅಥವಾ ಸಿಬ್ಬಂದಿಗಳ ಮೇಲೆ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು. ಹಾಗೂ ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿ ರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!