ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ  ಅರ್ಜಿ

ಯಾದಗಿರಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಹಾಪೂರ, ಸುರಪುರ, ಯಾದಗಿರಿ, ಗುರಮಠಕಲ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿಯಾಗಿರುವ 159- ಅಂಗನವಾಡಿ ಕಾರ್ಯಕರ್ತೆ ಹಾಗೂ 311 – ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರು, ಅಥವಾ ಅನ್ಯ ವ್ಯಕ್ತಿಗಳ ಮುಖಾಂತರ ವಾಮ ಮಾರ್ಗದ ಮೂಲ ಕ ಹಣಕಾಸು ನೀಡಿ ಆಯ್ಕೆ ಹೊಂದಲು ಪ್ರಯತ್ನಿಸಿದಲ್ಲಿ ಅಂತಹ ವರ ವಿರುದ್ಧ ಕಾನೂನಿನ ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ ಅವರು ತಿಳಿಸಿದ್ದಾರೆ.

ಅರ್ಜಿದಾರರಿಗೆ ನೇಮಕಾತಿ ಮಾಡಿಕೊಡುವುದಾಗಿ, ಯಾವುದೇ ವ್ಯಕ್ತಿಗಳಿಂದ ತಮಗೆ ಹಣ ನೀಡಿದ್ದಲ್ಲಿ , ಆಯ್ಕೆ ಮಾಡಿ ಕೊಡುವು ದಾಗಿ ಹೇಳಿದ್ದಲ್ಲಿ ಅಂತಹವರನ್ನು ಕಿವಿಗೊಡದೆ ಅವರ ವಿರುದ್ಧ ಜಿಲ್ಲಾಧಿಕಾರಿಗಳ ಕಚೇರಿಗೆ, ಜಿಲ್ಲಾ ಪಂಚಾಯತಿಗೆ ಹಾಗೂ ಯಾದಗಿರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಉಪನಿರ್ದೇಶಕರಿಗೆ ಲಿಖಿತ ರೂಪದಲ್ಲಿ ಅಥವಾ ಜಿಲ್ಲಾಧಿಕಾರಿ ಗಳ ಕಚೇರಿ, ದೂರವಾಣಿ ಸಂಖ್ಯೆ 08473 253 700 ಗೆ ದೂರು ನೀಡಲು ಅವರು ತಿಳಿಸಿದ್ದಾರೆ.

ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಹಪುರ್, ಸುರಪುರ್, ಯಾದಗಿರಿ, ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 159 -ಅಂಗನವಾಡಿ ಕಾರ್ಯಕರ್ತೆ ಹಾಗೂ 311- ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಈಗಾಗಲೇ ಪ್ರಕಟಣೆ ಹೊರಡಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಇಲಾಖಾ ಮಾರ್ಗ ಸೂಚಿಯನ್ವಯ ತಾಲೂಕ ಮಟ್ಟದ ಸಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಜಿಲ್ಲಾಧಿಕಾರಿ ಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯ ಕರ್ತೆ ಹಾಗೂ ಸಹಾಯಕರ ಆಯ್ಕೆ ಸಮಿತಿ ಸಭೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಅದರಂತೆ ಈಗಾಗಲೇ ತಾಲೂಕ ಮಟ್ಟದ ಪರಿಶೀಲಿನಾ ಸಮಿತಿ ಗಳಿಂದ ಪರಿಶೀಲನೆಗೊಂಡ ಅರ್ಜಿಗಳನ್ನು ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿತಗೊಂಡಿರುವ ಸಮಿತಿಯ ಮೂಲಕ ತಿರಸ್ಕೃತಗೊಂಡ ಅರ್ಜಿಗಳನ್ನು ಮರು ಪರಿಶೀಲನೆ ಕೈಗೊಳ್ಳಲಾಗುತ್ತಿದ್ದು, ಕೂಡಲೇ ನೇಮಕಾತಿ ಮಾರ್ಗ ಸೂಚಿಯಂತೆ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಕಾರಣ ಸಂಬಂಧಿಸಿದ ಅಭ್ಯ ರ್ಥಿಗಳು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!