ಯಾದಗಿರಿ : 2024-25ನೇ ಸಾಲಿನ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತೀವೃಷ್ಠಿಯಿಂದ ಯಾದಗಿರಿ ಜಿಲ್ಲೆಯಲ್ಲಿ 2024ರ ಅಕ್ಟೋಬರ್ ತಿಂಗಳದಿಂದ ಇಲ್ಲಿಯವರೆಗೆ ಉಂಟಾದ ಬೆಳೆಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ, ಉಪವಿಭಾಗಧಿಕಾರಿಗಳ, ತಹಸೀಲ್ದಾರ, ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಜಿಲ್ಲೆಯ ವೆಬ್‌ಸೈಟ್ http://yadgir.nic.in ನಲ್ಲಿ2024ರ ನವೆಂಬರ್ 14ರಂದು ಪ್ರಕಟಿಸಿದೆ.
ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲೂಕಾ ಕಛೇರಿಗಳಲ್ಲಿ 7 ದಿನಗಳ ಒಳಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.