ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಉಪಸ್ಥಿತಿ | ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕಾರ್ಯಕ್ರಮ

ಯಾದಗಿರಿ: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಭಾರತ ಸರ್ಕಾರ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಯಾದಗಿರಿ ಇವರ ವತಿಯಿಂದ ಧರ್ತಿ ಆಬಾ ಭಗವಾನ್ ಬಿರ್ಸಾಮುಂಡಾ ರ 150 ನೇ ಜನ್ಮ ದಿನಾಚರಣೆಯನ್ನು ಮಾನ್ಯ ಜಿಲ್ಲಾಧಿಕಾರಿಗಳು ಡಾ. ಸುಶೀಲಾ.ಬಿ ಅವರ ಉಪಸ್ಥಿತಿಯಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವಿಶ್ ಒರಡಿಯ ಮಾತನಾಡಿದರು.

ಮೊದಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರವರು ಪ್ರಸ್ತಾವಿಕವಾಗಿ ಮಾತನಾಡಿದರು.

ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಬೇವಿನ ಹಳ್ಳಿ ಹಾಗೂ ಸುರಪುರ ಶಾಲೆಯ ಮಕ್ಕಳು ಬುಡಕಟ್ಟು ಜನಾಂಗದ ವೇಷಭೂಷಣ ಧರಿಸಿ ವಿಶೇಷ ನೃತ್ಯ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು.

ನಂತರ ಕೃಷಿ ಇಲಾಖೆವತಿಯಿಂದ ಮಣ್ಣು ಪರೀಕ್ಷೆ ಪತ್ರ, ವಿತರಣೆ ಮಾಡಲಾಯಿತು ಮತ್ತು ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮ ಆಯೋಜಿಸಿಲಾಯಿತು.  ಸ್ಥಳಿಯ ಮುಖಂಡರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!