ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ, ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಕೆ
ಯಾದಗಿರಿ: ಸರ್ಕಾರ ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ಅಮಾಯಕರ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಹೆಸರು ಬರುತ್ತಿದೆ. ಇದರಿಂದ ರೈತ ಸಮೂಹ ಆತಂಕಕ್ಕೊಳಗಾಗಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ ಗುಡುಗಿದರು.
ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿ ಎದುರು ಕಾಂಗ್ರೆಸ್ ನ ತುಷ್ಟೀಕರಣದ ನೀತಿ ಹಾಗೂ ವಕ್ಫ್ ಬೋರ್ಡನ ಲ್ಯಾಂಡ್ ಜಿಹಾದ್ ನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
ಈ ಪ್ರತಿಭಟನೆಯಲ್ಲಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ, ನಗರಸಭೆ ಅಧ್ಯಕ್ಷೆ ಕುಮಾರಿ ಲಲಿತಾ ಅನಪೂರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲ ರೆಡ್ಡಿ ನಾಯ್ಕಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ಮೇಲಪ್ಪ ಗುಳಗಿ, ಹಾಗೂ ಜಿಲ್ಲಾ ಉಪಾಧ್ಯಕ್ಷರು,ಕಾರ್ಯದರ್ಶಿಗಳು, ಮಂಡಲ ಪದಾಧಿಕಾರಿಗಳು, ಪಕ್ಷದ ವಿವಿಧ ಸ್ಥರದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.