ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಪ್ರತಿಭಟನೆ
ಯಾದಗಿರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿದ್ದು, ಸರ್ಕಾರದ ಲೋಪವೇ ಇದಕ್ಕೆ ಕಾರಣ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ಮನರಂಜನ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‌ಐ ಏಜೆಂಟರು, ಒಂದು ಕೋಮಿನ ಮೂಲಭೂತವಾದಿಗಳು ಇವರೆಲ್ಲರಿಗೂ ಜೈಲಲ್ಲಿ ಟಿ.ವಿ, ಮೊಬೈಲ್ ಫೋನ್, ಗುಂಡು ತುಂಡುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಎಲ್ಲವೂ ಬಹಳ ಸರಾಗವಾಗಿ ನಡೆಯುತ್ತಿದ್ದರೂ ರಾಜ್ಯ ಸರಕಾರವು ಕಣ್ಮುಚ್ಚಿ ಕುಳಿತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ್ರೋಹಿಗಳಿಗೆ ಐಷಾರಾಮಿ ವ್ಯವಸ್ಥೆಗಳನ್ನು ಪರಪ್ಪನ ಅಗ್ರಹಾರ ಜೈಲಲ್ಲಿ ಮಾಡಲಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆದೇ ರೀತಿ ಜೈಲಿನ ವ್ಯವಸ್ಥೆಯೂ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ. ಸರಕಾರದ ಕುಮ್ಮಕ್ಕು ಇಲ್ಲದಿದ್ದರೆ ಈ ರೀತಿ ಜೈಲಿನಲ್ಲಿ ವ್ಯವಸ್ಥೆ ಆಗಲು ಸಾಧ್ಯವಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದಕರಿಗೆ ಜೈಲಿನಲ್ಲೇ ಎಲ್ಲ ಅವಶ್ಯ ಸೌಲಭ್ಯ ಸಿಗುತ್ತಿದೆ ಎಂದರೆ, ದೇಶದ್ರೋಹಿಗಳ ಕೇಸನ್ನು ಹಿಂಪಡೆಯಲು ಹಿಂಜರಿಯಲ್ಲ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ಮಾಜಿ ಜಿಲ್ಲಾಧ್ಯಕ್ಷ ಮಾಜಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲರೆಡ್ಡಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್ ಸಾಹುಕಾರ, ವೇಣುಗೋಪಾಲ್ ಜೇವರ್ಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರುಕುಂದಿ, ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಿಂದ್ರನಾಥ ನಾದ್, ವೆಂಕಟರಡ್ಡಿ ಅಬ್ಬೆತುಮಕೂರ್, ದೇವರಾಜ ನಾಯಕ್ ಉಳ್ಳೆಸೂಗೂರು, ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಜಾಕ, ಸ್ವಾಮಿದೇವ ದಾಸನಕೇರಿ, ರಾಮು ರಾಠೋಡ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೋನಗೇರಾ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೋರ್, ಚನ್ನವೀರಯ್ಯಸ್ವಾಮಿ, ಗೋವಿಂದಪ್ಪ ಕೊಂಚಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ, ರಮಾದೇವಿ ಕವಲಿ, ಕರೆಮ್ಮ, ಬಾಲಮ್ಮ, ಶಿವಲೀಲಾ, ಸಾಯಿಬಣ್ಣ ಚಂಡ್ರಿಕಿ, ಸಿ ಮಲ್ಲು ಕೋಲಿವಾಡ, ಮಂಜುನಾಥ್ ಗುತ್ತೇದಾರ, ಹಣಮಂತ ಬಂದಳ್ಳಿ, ಅಜಯ ಮಡ್ಡಿ, ಮಲ್ಲಿಕಾರ್ಜುನ್ ಬಂಗಿ, ವಿಶ್ವನಾಥ ಜಾಕನಹಳ್ಳಿ, ಮರಲಿಂಗ ಜಿನಿಕೇರಿ, ಮೌನೇಶ್ ತುಂಬಳ, ಬಸ್ಸು ಬಳಿಚಕ್ರ, ಶಿವು ಗಣಪೂರ, ಭೀಮು ದೇಸಾಯಿ, ತಿರುಪತಿ ಚೌವ್ಹಾಣ, ಸಲ್ಲು ದಂಡಿನ, ಆಕಾಶ ಗುತ್ತೇದಾರ, ಶಿವು ಗುತ್ತೇದಾರ, ನಾಗರೆಡ್ಡಿ, ಸಾಯಿ ಕುಮಾರ್,ಸಲ್ಲು ಯಡಳ್ಳಿ ಸೇರಿದಂತೆ ಪಕ್ಷದ ಯುವ ಮೋರ್ಚಾ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.
