ದಡಾರ ಮತ್ತು ರುಬೆಲ್ಲಾ ರೋಗ ಸಂಪೂರ್ಣವಾಗಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ | ಲಸಿಕೆ ನೀಡಲು 133 ತಂಡ ರಚನೆ

ಯಾದಗಿರಿ : ದಡಾರ ಮತ್ತು ರುಬೆಲ್ಲಾ ರೋಗವನ್ನು ಸಂಪೂರ್ಣ ವಾಗಿ ನಿರ್ಮೂಲನೆ ಮಾಡಲು ಎಲ್ಲರೂ ಸಹಕರಿಸ ಬೇಕೆಂದು ಯಾದಗಿರಿ ತಾಲೂಕಿನ ತಹಸಿಲ್ದಾರರಾದ ಸುರೇಶ ಅಂಕಲಗಿ ಅವರು ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಬುಧವಾರ ತಾಲೂಕ ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ಯಾದಗಿರಿ ತಾಲೂಕಿನ ತಹಸೀಲ್ದಾರ ಅಧ್ಯಕ್ಷತೆಯಲ್ಲಿ ತಹಸಸೀ ಲ್ದಾರರ ಕಾರ್ಯಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಮನ್ವಯ ಸಮಿತಿ, ದಡಾರ ಮತ್ತು ರುಬೆಲ್ಲಾ ರೋಗ ನಿರ್ಮೂಲ ನಾ ಕಾರ್ಯಕ್ರಮದ ಯಾದಗಿರಿ ತಾಲೂಕ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಯಾದಗಿರಿ ಹಾಗೂ ಗುರುಮಠಕಲ್ ತಾಲೂಕಿನ ವ್ಯಾಪ್ತಿಯಲ್ಲಿ ಬರುವ 5 ವರ್ಷದ ಒಳಗಿನ ಲಸಿಕೆಯಿಂದ ವಂಚಿತರಾದ ಮಕ್ಕಳನ್ನು ಪತ್ತೆ ಹಚ್ಚಿ, ಎಲ್ಲಾ ಮಕ್ಕಳಿಗೆ, ದಡಾರ ಮತ್ತು ರುಬೆಲ್ಲಾ ರೋಗದ ಮಾಹಿತಿ ಜೊತೆಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ತಾಲೂಕಿನಾದ್ಯಾಂತ ಹಮ್ಮಿಕೊಳ್ಳಲಾಗುತ್ತದೆ. ದಡಾರ ಮತ್ತು ರುಬೆಲ್ಲಾ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಎಲ್ಲರೂ ಸಹಕರಿಸಬೇಕೆಂದು ಸಲಹೆ ನೀಡಿದರು.

ಯಾದಗಿರಿ ಹಾಗೂ ಗುರುಮಠಕಲ್ ತಾಲೂಕ ಆರೋಗ್ಯ ಅಧಿಕಾರಿಗಳಾದ ಡಾ.ಹನುಮಂತ ರೆಡ್ಡಿ ಅವರು ಮಾತನಾಡಿ, ಯಾದಗಿರಿ ಮತ್ತು ಗುರುಮಠಕಲ್ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ನಗರ ಹಾಗೂ ಗ್ರಾಮಗಳಲ್ಲಿ ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆ ಯರು ಮನೆ ಮನೆಗೆ ತೆರಳಿ ಸಮಿಕ್ಷೆ ಮಾಡಿ 1611 ಲಸಿಕೆ ವಂಚಿತ ಮಕ್ಕಳನ್ನು ಪತ್ತೆ ಹಚ್ಚಲಾಗಿರುತ್ತದೆ.

ವಿಶೇಷ ಲಸಿಕಾ ಕಾರ್ಯಕ್ರಮಕ್ಕೆ 133 ತಂಡಗಳನ್ನು ಮಾಡಿ, ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ನೀಡಲಾಗುತ್ತದೆ. ಈ ಲಸಿಕೆ ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ. ಕಾರ್ಯಕ್ರಮಕ್ಕೆ ತಾಲೂಕ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿ ದಡಾರ ಮತ್ತು ರುಬೆಲ್ಲಾ ರೋಗ ಮುಕ್ತ ತಾಲೂಕುಗಳನ್ನಾಗಿ ಮಾಡಬೇಕಾಗಿರುತ್ತದೆ. ಪಾಲಕರಿಗೂ ಸಹ ತಮ್ಮ ಮಕ್ಕಳಿಗೆ ಲಸಿಕೆ ಪಡೆಯಲು ಉತ್ತೇಜನ ನೀಡಿ ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ತಿಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ  ತುಳಸಿರಾಮ ಚವ್ಹಾಣ, ತಾಲೂಕ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು,ಆರೋಗ್ಯ ಇಲಾಖೆಯ ಆಡಳಿತ ವೈದ್ಯಾಧಿಕಾರಿ ಗಳು, ವೈದ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!