ಯಾದಗಿರಿ : ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಕರ್ನಾಟಕ ಸಂಭ್ರಮ-50ರ (ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ) ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಯಾದಗಿರಿ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣವನ್ನು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.