ರಾಷ್ಟ್ರೀಯ ಕಾನೂನು ಸೇವೆಗಳ ದಿನ :  ಹಿರಿಯ ಸಿವಿಲ್ ನ್ಯಾ. ಮರಿಯಪ್ಪ ಮಾತು 

ಯಾದಗಿರಿ : ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ದೇಶ್ಯಾದ್ಯಂತ ಆಚರಿಸಲಾಗುತ್ತಿದೆ. ಮಹಿಳೆಯರು, ಮಕ್ಕಳು ಹಾಗೂ ತುಳಿತಕ್ಕೆ ಒಳಗಾದ ಸಮೂದಾಯಗಳು, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರು ಕಾನೂನು ನೆರವು ಪಡೆಯಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾದ ಮರಿಯಪ್ಪ ಅವರು ಹೇಳಿದರು.

ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಯಾದಗಿರಿ ಮಹಿಳಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಭಾರತವು ಪ್ರತಿ ವರ್ಷ ನವೆಂಬರ್ 9 ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸುತ್ತದೆ ಎಂದರು.

ಉಚಿತ ಕಾನೂನು ಅರಿವು ಮತ್ತು ನೆರವಿನ ಲಭ್ಯತೆಯ ಬಗ್ಗೆ ಜನರಿಗೆ ತಿಳಿಸಲು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ದೇಶ್ಯಾದ್ಯಂತ ಆಚರಿಸಲಾಗುತ್ತಿದೆ. ದೌರ್ಜನ್ಯ ಒಳಗಾದ ಅಥವಾ ನೊಂದ ಯಾವುದೇ ಸಮೂದಾಯ ವ್ಯಕ್ತಿಗಳು ಕಾನೂನು ನೆರವು ಪಡೆಯಬಹುದಾಗಿದೆ.

ರಾಷ್ಟ್ರೀಯ ಮಟ್ಟದಿಂದ ತಾಲೂಕು ಮಟ್ಟದ ವರೆಗೆ ಕಾನೂನು ಸೇವೆಗಳ ಪ್ರಾಧಿಕಾರ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ ಎಂದರು.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ರಾಜ್ಯ ಶಾಸ್ತ್ರ ಉಪನ್ಯಾಸಕ ಡಾ.ಉದಯ ಕುಮಾರ ದೊಡ್ಡಮನಿ ಅವರು ಮಾತನಾಡಿ, ಸಮಾನ್ಯ ನಾಗರಿಕರು ಕೂಡಾ ಸಂವಿಧಾನ ನೀಡಿದ ತಮ್ಮ ಹಕ್ಕುಗಳನ್ನು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ತಿಳಿದಿರಬೇಕು.

ಪ್ರತಿಯೊಬ್ಬರು ಹಕ್ಕುಗಳು ಪಡೆಯಬೇಕು ಅದರಂತೆ ಕರ್ತವ್ಯಗಳನ್ನು ಕೂಡಾ ಪಾಲನೆ ಮಾಡಬೇಕು ಎಂದು ಹೇಳಿದರು.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಹರೀಶ್ ರಾಠೋಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಿಬ್ಬಂದಿಗಳು, ಶಿಕ್ಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!