ಯಾದಗಿರಿ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ ಜಿಲ್ಲಾ ಬಾಲ ಭವನ ಸೊಸೈಟಿ ವತಿಯಿಂದ 6 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು 2024ರ ನವೆಂಬರ್ 7 ರಂದು ಬೆಳಿಗ್ಗೆ 10.30 ಗಂಟೆಗೆ ಜೈನ್ ಕಾಲೋನಿ ಲುಂಬಿನಿ ಉದ್ಯಾನವನ ಹತ್ತಿರ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ ತಿಳಿಸಿದ್ದಾರೆ.
ಮಕ್ಕಳ ವಿವಿಧ ಸ್ಪರ್ಧೆಗಳು ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರಿಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರಿಯ ಸಂಗೀತ, ಹೊಂದೂಸ್ತಾನಿ ಶಾಸ್ತ್ರಿಯ ಸಂಗೀತ, ಸುಗಮ ಸಂಗೀತ, ವಾದ್ಯ ಸಂಗೀತ, ತಬಲಾ, ಮೃದಂಗ, ಕೀ ಬೋರ್ಡ, ಕೊಳಲು, ಡೊಳ್ಳು ಮತ್ತು ನಗಾರಿ, ವಿಜ್ಞಾನದಲ್ಲಿ ನೂತನ ಅವಿಷ್ಕಾರ, ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ಸರಕಾರಿ, ಖಾಸಗಿ ಶಾಲೆಗಳು ಹಾಗೂ ಸಂಘ ಸಂಸ್ಥೆಯ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಹೆಚ್ಚಿನ ಮಾಹಿತಿಗಾಗಿ ದೂ.ಸಂ.8792456896ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.