ಬೆಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.), ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಸಂಘಟನೆಯ ಯಾದಗಿರಿ ಜಿಲ್ಲಾ ಸಂಚಾಲಕರಾಗಿ ಅಶೋಕ್ ಎಸ್. ಗುರುಮಠಕಲ್ ಅವರನ್ನು ಆಯ್ಕೆ ಮಾಡಿ ಅಧಿಕೃತ ಜವಾಬ್ದಾರಿ ನೀಡಲಾಗಿದೆ.
ಬೆಂಗಳೂರಿನ ರಾಜ್ಯ ಸಮಿತಿ ಕೇಂದ್ರ ಕಚೇರಿಯಲ್ಲಿ ಅವರಿಗೆ ಅಧಿಕೃತ ಆದೇಶ ಪತ್ರವನ್ನು ಹಸ್ತಾಂತರಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಸಂಘಟನೆಯ ತತ್ವ, ಸಿದ್ಧಾಂತ ಹಾಗೂ ಸಂವಿಧಾನದ ಆಶಯಗಳಿಗೆ ಬದ್ಧವಾಗಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಶೋಕ್ ಎಸ್. ಗುರುಮಠಕಲ್ ಅವರು ಕಾರ್ಯನಿರ್ವಹಿಸಲಿದ್ದಾರೆ.
ಈ ನೇಮಕಾತಿ ಆದೇಶವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಹಾಗೂ ಆಂತರಿಕ ಶಿಸ್ತು ಮತ್ತು ತರಬೇತಿ ವಿಭಾಗದ ಸುರೇಶ್ ಮೆಂಗನ್ ಅವರು ವಿತರಿಸಿದರು.
