ಗುರುಮಠಕಲ್ ಪಟ್ಟಣಕ್ಕೆ ಭೀಮಾನದಿ ಮೂಲದಿಂದ ಕುಡಿಯುವ ನೀರು ಸರಬರಾಜು ಯೋಜನೆಯ
ಯಾದಗಿರಿ : ನಗರಾಭಿವೃದ್ಧಿ ಇಲಾಖೆ ಹಾಗೂ ಯಾದಗಿರಿ ಜಿಲ್ಲಾಡಳಿತ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಮತ್ತು ಗುರುಮಠಕಲ್ ಪುರಸಭೆ ಸಂಯುಕ್ತಾಶ್ರಯದಲ್ಲಿ ಗುರುಮಠಕಲ್ ಪಟ್ಟಣಕ್ಕೆ ಭೀಮಾನದಿ ಮೂಲದಿಂದ ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯ ಅಂದಾಜು ಮೊತ್ತ 2475 ಲಕ್ಷ ರೂ.ಗಳ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಜೂನ್ 24 ರಂದು ಬೆಳಿಗ್ಗೆ 10 ಗಂಟೆಗೆ ಗುರುಮಠಕಲ್ ಹೈದ್ರಾಬಾದ್ ಮುಖ್ಯ ರಸ್ತೆಯಲ್ಲಿ ಆಯೋಜಿಸಲಾಗಿದೆ.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ಕಾರ್ಯಕ್ರಮವನ್ನು ಉದ್ಘಾಟಿಸುವರು. ಧಾರವಾಡ ಗ್ರಾಮೀಣ ವಿಧಾನಸಭಾ ಶಾಸಕರು ಹಾಗೂ ಬೆಂಗಳೂರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ ಹಾಗೂ ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಗೌರವಾನ್ವಿತ ಉಪಸ್ಥಿತಿಯಲ್ಲಿ ನೆರವೇರಲಿದೆ.
ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅಧ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ವಿಶೇಷ ಅತಿಥಿಗಳಾಗಿ ಆಗಮಿಸುವರು.
ವಿಧಾನ ಪರಿಷತ್ತು ಸದಸ್ಯ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ಗುರುಮಠಕಲ್ ಪುರಸಭೆ ಅಧ್ಯಕ್ಷೆ ಜಯಶ್ರೀ ಪೂ.ಪಾಟೀಲ್, ಗುರುಮಠಕಲ್ ಪುರಸಭೆ ಉಪಾಧ್ಯಕ್ಷೆ ರೇಣುಕಾ ಪಡಿಗೆ, ಗುರುಮಠಕಲ್ ಪುರಸಭೆ ಸರ್ವ ಸದಸ್ಯರು ಪಾಲ್ಗೊಳ್ಳುವರು.
ಆರೋಗ್ಯವೇ ಭಾಗ್ಯ ಸ್ವಚ್ಛತೆಯೇ ಆರೋಗ್ಯದ ಮೂಲಮಂತ್ರ “ನೀರು ಅತಿ ಅಮೂಲ್ಯ ಅದನ್ನು ಮಿತವಾಗಿ ಬಳಸಿ”
ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ದೀಪ ಚೋಳನ್, ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಯಾದಗಿರಿ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಮತ್ತು ಯೋಜನಾ ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ, ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಬೆಂಗಳೂರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ.ಆರ್, ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಕುಮಾರ ಗಂಗ್ವಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಆಗಮಿಸುವರು.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಖ್ಯ ಅಭಿಯಂತರರು ಪ್ರವೀಣ ಲಿಂಗಯ್ಯ, ಯಾದಗಿರಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರ ಲಕ್ಷ್ಮೀಕಾಂತ, ಕಲಬುರಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರ ನರಸಿಂಹರಡ್ಡಿ ಎನ್, ಸಹಾಯಕ ಕಾರ್ಯಪಾಲಕ ಅಭಿಯಂತರ ಅಶೋಕ ಕುಮಾರ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋಶಿ, ಕಿ. ಅಭಿಯಂತರ ಅಬ್ದುಲ್ ಅಲೀಮ್ ಇರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
