ಭಾರತ- ಪಾಕಿಸ್ತಾನ ಯುದ್ದ ಭೀತಿ ಹಿನ್ನೆಲೆ |ಅವಶ್ಯಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಹಾಗೂ ಸಿದ್ಧತೆಯಲ್ಲಿ ರಲು ಸೂಚನೆ

ಯಾದಗಿರಿ: ಭಾರತ- ಪಾಕಿಸ್ತಾನ ಯುದ್ಧ ಭೀತಿ ಹಿನ್ನೆಲೆಯಲ್ಲಿ ಅವಶ್ಯಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಾಗೂ ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲ. ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಭಾರತ -ಪಾಕ್ ಯುದ್ದ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳ ಕುರಿತ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಜನನಿಬೀಡ, ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ಇಟ್ಟು ಪೊಲೀಸ್ ಇಲಾಖೆಯಿಂದ ತಪಾಸಣೆ ಕಾರ್ಯ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ತುರ್ತು ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸರ್ಕಾರಿ,ಖಾಸಗಿ ಆಸ್ಪತ್ರೆಗಳು, ನುರಿತ ವೈದ್ಯರೊಂದಿಗೆ ಸಿದ್ಧತೆಯಲ್ಲಿರಬೇಕು. ಆಶ್ರಯ ತಾಣಗಳಿಗಾಗಿ ಸರ್ಕಾರಿ ಸಂಸ್ಥೆಗಳ ಮ್ಯಾಪಿಂಗ್ ಮಾಡಿಕೊಳ್ಳಬೇಕು. ಎನ್,ಸಿ,ಸಿ ,ಎನ್ ಎಸ್ ಎಸ್ ಮತ್ತು ಇತರೆ ಸ್ವಯಂ ಸೇವಕ ರು ಸಿದ್ಧತೆಯಲ್ಲಿಡಬೇಕು. ವಿವಿಧ ಸಾಮಗ್ರಿಗಳ ಬೆಲೆ ಏರಿಸಿ ಮಾರಾಟವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಇದಕ್ಕಾಗಿ ದೂರು ನಿರ್ವಹಣಾ ಸಮಿತಿ ಸಹ ರಚಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಕಂಟ್ರೋಲ್ ರೂಮ್ ಆರಂಭಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಯುದ್ದಕ್ಕೆ ಸಂಬಂದಿಸಿದ ಫೇಕ್ ಸುದ್ದಿ ಹರಡಿಸದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಧಾರ್ಮಿಕ ಸಹಿಷ್ಣುತೆ ಕಾಪಾಡಿಕೊಳ್ಳಲು ಹಾಗೂ ಪರಸ್ಪರ ಸೌಹಾರ್ದಯುತವಾಗಿ ಇರಲು ಕೋರಿದ್ದು ,ಕಮ್ಯುನಲ್ ಸಂಘರ್ಷಗಳ ಬಗ್ಗೆ ತೀವ್ರ ಕಟ್ಟೆಚ್ಚರವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ, ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅಣಕು ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿಯೂ ಇಂತಹ ಅಣಕು ಪ್ರದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸಾರ್ವಜನಿಕರಿಗೆ ಬೇಕಾಗುವ ಅಗತ್ಯ ವಸ್ತುಗಳ ಬೆಲೆಯನ್ನು ಅನಗತ್ಯವಾಗಿ ಹೆಚ್ಚಳ ಮಾಡುವ ಪ್ರಯತ್ನಗಳು ಮಾಡಿದ್ದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳಾದ ಡಾ.ಸುಶೀಲಾ ಬಿ. ಅವರು ತಿಳಿಸಿದ್ದಾರೆ.

ನಾಗರಿಕರ ರಕ್ಷಣೆಯ ಭಾಗವಾಗಿ ಸಾರ್ವಜನಿಕರು ದೊಡ್ಡ ಪ್ರಮಾಣದ ಸಮಾರಂಭ ಮಾಡುವುದಾಗಲಿ, ಸಾರ್ವಜನಿ ಕ ಸ್ಥಳಗಳಿಗೆ ಹೋಗುವುದನ್ನು ಮಾಡಬಾರದು. ಅಲ್ಲದೆ ಪ್ರಸ್ತುತ ಸಂದಿಗ್ದ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ 24*7 ತುರ್ತು ಸಹಾಯವಾಣಿ ಸಂಖ್ಯೆ: 08473-253950ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಮಾತನಾಡಿ, ಭಾರತದ ಗಡಿಗೆ ಮಾತ್ರ ಈ ಯುದ್ಧ ಸೀಮಿತವಾಗಿಲ್ಲ.ಕಾರಣ ಸುರಕ್ಷತೆಗಾಗಿ ಅವಶ್ಯಕ ಸಿದ್ಧತೆಯಲ್ಲಿ ಇರಬೇಕು. ಸಾರ್ವಜನಿಕರ ಹಿತದೃಷ್ಟಿ ಯಿಂದ, ಹೆಚ್ಚಿನ ಜನ ಒಂದು ಕಡೆ ಸೇರುವುದು,ಧರಣಿ, ಸತ್ಯಾಗ್ರಹ, ಧಾರ್ಮಿಕ ಸಾಮೂಹಿಕ ಕಾರ್ಯಕ್ರಮಗಳನ್ನು ಮುನ್ನೆಚ್ಚರಿಕೆಯಾಗಿ ಅವಾಯ್ಡ್ ಮಾಡುವುದು ಸೂಕ್ತ.ಭಯೋತ್ಪಾದನಾ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜನನಿಬಿಡ ಪ್ರದೇಶದಲ್ಲಿ ಇಲಾಖೆಯಿಂದ ಸೂಕ್ತ ತಪಾಸಣೆ ಹಾಗೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ನಾರಾಯಣಪುರ್ ಡ್ಯಾಂ ಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ತೀವ್ರ ನಿಗಾ ಇಡಲಾಗಿದೆ. ಮಾಕ್ ಡ್ರಿಲ್ ಸಹ ಶೀಘ್ರದಲ್ಲೇ ಮಾಡಲಾಗುವುದು ಎಂದ ಅವರು ಎಲ್ಲ ಅಧಿಕಾರಿಗಳ ಮಧ್ಯೆ ಸಮನ್ವಯತೆ ಇರಬೇಕು. ಸಾರ್ವಜನಿಕರು ಸಹ ಸಹಕರಿಸುವಂತೆ ಸಲಹೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ : ತೀವ್ರ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳ ನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿ ಸೂಚಿಸಿದರು.

ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ ಸಭೆ ನಡೆಸಿದ ಅವರು, ಕುಡಿಯುವ ನೀರಿನ ‌ಸಮಸ್ಯೆ ಎದುರಿಸುತ್ತಿರುವ ಸಮಸ್ಯಾತ್ಮಕ ಗ್ರಾಮಗಳಿಗೆ ತಕ್ಷಣ ಶುದ್ಧ ನೀರು ಪೂರೈಕೆ ಗೆ ಕ್ರಮ ಕೈಗೊಳ್ಳಬೇಕು.ಸಣ್ಣ ಪುಟ್ಟ ದುರಸ್ತಿ ಕಾರ್ಯಗಳನ್ನು ಕೈಗೊಂಡು ನೀರು ಪೂರೈಸಬೇಕು.ಆಯಾ ತಾಲೂಕಿನ ತಹಸೀಲ್ದಾರರು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು, ಪಿಡಿಒ, ಗ್ರಾ.ಪಂ. ಸಿಬ್ಬಂದಿ ಗಳು, ನಿರ್ಲಕ್ಷ ತೋರದೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಕುಡಿಯುವ ನೀರಿನ ಕುರಿತು ದೂರು ಬಂದ ಕಡೆ ತಕ್ಷಣ ಸ್ಪಂದಿಸಲು ಸೂಚಿಸಿದರು. ಸದ್ಯ ಜಿಲ್ಲೆಯ 39 ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಸಮರ್ಪಕ ನೀರು ಪೂರೈಕೆಗೆ ಸೂಚಿಸಿದರು.

ಅಶುದ್ಧ ನೀರು ಪರೀಕ್ಷಿಸಬೇಕು.ಸಿಡಿಲುದಿಂದ ಮಾನವ ಸಾವಾಗಿ ಹಾನಿಯಾಗದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕೆ ಗಳ ಬಗ್ಗೆ ಸೂಕ್ತ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆ,ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ವಿದ್ಯುತ್ ಇಲಾಖೆ ಅಧಿಕಾರಿಗಳು ಅವಶ್ಯಕ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ್ ಪ್ರೀಯದರ್ಶಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!