ಯಾದಗಿರಿ: ಯಾದಗಿರಿ ಜಿಲ್ಲೆಯ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಾರಿಗೆ ಸಮಸ್ಯೆಗಳಿಗೆ ಮುಕ್ತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕಕರಸಾ ನಿಗಮ) ಯಾದಗಿರಿ ವಿಭಾಗದಿಂದ 06-07-2026 ರಂದು ಮಧ್ಯಾಹ್ನ 3.30 ರಿಂದ ಸಂಜೆ 5.30 ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಯಾದಗಿರಿ ವಿಭಾಗದ ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿಯ ಕಕರಸಾ ನಿಗಮದ ಕೇಂದ್ರ ಕಛೇರಿಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯ ಮೇರೆಗೆ ಪ್ರತಿ ತಿಂಗಳ ಮೊದಲನೆಯ ಸೋಮವಾರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ನಿಗದಿಪಡಿಸಿದ ಸಮಯದಲ್ಲಿ ಯಾದಗಿರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳೊಂದಿಗೆ ದೂರವಾಣಿ ಕರೆಗಳ ಮೂಲಕ ನೇರವಾಗಿ ಮಾತನಾಡಲಿದ್ದಾರೆ.

ಸಾರ್ವಜನಿಕರು, ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಭಾಗದ ಬಸ್ ಸೌಕರ್ಯ, ಸಮಯದ ಏರುಪೇರು ಸೇರಿದಂತೆ ಇತರೆ ಸಾರಿಗೆ ಸಮಸ್ಯೆಗಳ ಕುರಿತು ದೂರವಾಣಿ 6366423882 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜಿಲ್ಲೆಯ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ನೇರ ಫೋನ್ ಇನ್ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಲು ಕೋರಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!