ನವಂಬರ್ ಒಂದಕ್ಕೆ ಬೆಂಗಳೂರುನಲ್ಲಿ ಪಕ್ಷದ ಬೃಹತ್ ಸಮಾವೇಶಕ್ಕೆ ಕರೆ

ಯಾದಗಿರಿ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು.

ನಗರದ ಕೇಂದ್ರ ಬಸ್ ನಿಲ್ದಾಣ ದ ಮೂಲಕ ಅಭಿಯಾನಕ್ಕೆ ಚಾಲನೆ ಶಾಸ್ತ್ರಿ ವೃತ್ತ, ಅಂಬೇಡ್ಕರ್ ವೃತ್ತ,ಮಹಾತ್ಮ ಗಾಂಧಿ ವೃತ್ತದ ವರೆಗೆ ಪಾದಯಾತ್ರೆ ಮಾಡಿ ಅಭಿಯಾನದ ಕುರಿತು ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಜೋಗನಹಳ್ಳಿ ಗುರುಮೂರ್ತಿ, ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ, ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ. ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ರಾಜ್ಯದ ಮತದಾರರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ, ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಎಂದರು.

ಕೆಆರ್ ಎಸ್  ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಒಂದು ದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಮಾತನಾಡಿ, ರಾಜ್ಯದಲ್ಲಿ ರೈತರು, ಮಹಿಳೆಯರು, ವಿದ್ಯಾರ್ಥಿ, ಕೃಷಿ ಕಾರ್ಮಿಕರಿಗೆ ಉತ್ತಮವಾದ ಜೀವನ ನಿರ್ವಹಣೆಗೆ ಅನಾನುಕೂಲದ ವಾತಾವರಣ ನಿರ್ಮಾಣವಾಗಿದೆ. ಈ ಎಲ್ಲಾ ಅವ್ಯವಸ್ಥೆಗಳನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮವಾದ ಜನ ಜೀವನ ಮಾಡುವಂತೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದು ಇದಕ್ಕೆ ಕನ್ನಡಪರ,ರೈತಪರ,ಪ್ರಗತಿಪರ ಸಂಘಟನೆಗಳ ಮುಖಂಡರು,ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಆನಂದ್, ಪ್ರಸನ್ನ ಕುಮಾರ್,ರೈತ ಘಟಕದ ಕಾರ್ಯದರ್ಶಿ, ಶಿವರಾಜ್ ಕಪಗಲ್,ಜಿಲ್ಲಾಧ್ಯಕ್ಷ ಜಗನ್ನಾಥ,ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ, ಕಾರ್ಯದರ್ಶಿ,ಬಸವರಾಜ, ಯುವ ಘಟಕದ ಕಾರ್ಯದರ್ಶಿ ಶಾಂತಕುಮಾರ್, ರೈತ ಘಟಕದ ಜಿಲ್ಲಾಧ್ಯಕ್ಷ ಜಯವಂತ , ಕಾರ್ಯದರ್ಶಿ ಸೋಮನಗೌಡ, ಹನುಮಂತ, ಬಸಲಿಂಗಪ್ಪ ದುಪ್ಪಳ್ಳಿ,ಹನುಮಂತ ಸುರಪುರ,ನರಸಿಂಹ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!