ಫೆ. 13ರ ವರೆಗೆ ಜಿಲ್ಲಾದ್ಯಂತ ಅಭಿಯಾನ

ಯಾದಗಿರಿ : ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಪಣತೊ ಟ್ಟು ಕಾರ್ಯ ಪ್ರವೃತರಾಗಿ, ಗ್ರಾಮ ಪಂಚಾಯತಿ, ನಗರ ಪ್ರದೇಶ ಗಳ ವಾಪ್ತಿಯಲ್ಲಿ ಹೆಚ್ಚಾಗಿ ಜಾಗೃತಿಯನ್ನು ಮೂಡಿಸಬೇಕು ಎಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು ಹೇಳಿದರು.

ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಡಿಟಿಎಫ್ ಸಭೆಯಲ್ಲಿ ಸ್ಪರ್ಶಕುಷ್ಠ ರೋಗ ಜಾಗೃತಿ ಅಭಿಯಾನವನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಗರದ ವ್ಯಾಪ್ತಿಯಲ್ಲಿ ಬರುವ ಜೀವನ ಜ್ಯೋತಿ ಕಾಲೋನಿಗೆ ಭೇಟಿ ನೀಡಿ ಜಾಗೃತಿಯ ಜೊತೆಗೆ ಆರೋಗ್ಯ ತಪಾಸಣೆ ಮಾಡಿ ಅವರಿಗೆ ಅವಶ್ಯವಿರುವ ಸ್ವಯಂ ರಕ್ಷಣೆ ಕಿಟ್ ಮತ್ತು ಪಾದರಕ್ಷೆ ಹಾಗೂ ಇನ್ನಿತರ ಉಪಕರಣಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು.

ಶಂಕಿತ ಕುಷ್ಠರೋಗದ ಲಕ್ಷಣಗಳು ಚರ್ಮದ ಮೇಲಿನ ಯಾವು ದೇ ತಿಳಿ, ಬಿಳಿ, ತಾಮ್ರ ಬಣ್ಣದ ಮಚ್ಚೆ, ದಪ್ಪನಾದ ಎಣ್ಣೆ ಪಸರಿಸಿ ದಂತಹ ಹೊಳೆಯುವ ಚರ್ಮ, ದೇಹದ ಮೇಲಿನ ಗಂಟುಗಳು, ಕಣ್ಣಿನರೆಪ್ಪೆಗಳನ್ನು ಮುಚ್ಚುವಲ್ಲಿ ತೊಂದರೆ, ಕೈ ಅಥವಾ ಕಾಲುಗ ಳಲ್ಲಿ ಬಹುದಿನದ ಗಾಯ, ಕೈ ಅಥವಾ ಕಾಲುಗಳಲ್ಲಿ ಬೆರಳು ಮಡಿಚಿಕೊಂಡಿರುವುದು, ನಡೆಯುವಾಗ ಕಾಲು ಎಳೆಯುವು ದು, ಕೈ ಅಥವಾ ಕಾಲುಗಳಲ್ಲಿ ಜುಮ್ಮೆನಿಸುವಿಕೆ ಅಥವಾ ಮರುಗ ಟ್ಟುವಿಕೆ, ಅಂಗೈ ಅಥವಾ ಪಾದಗಳಲ್ಲಿ ಶೀತ/ಬಿಸಿ/ಸಂವೇದನೆ ನಷ್ಟವಾಗಿರುವ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಜಾಗೃತಿ ಬಿತ್ತಿ ಪತ್ರಗಳನ್ನು ಬಿಡು ಗಡೆ ಗೊಳಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ ಬಿರದಾರ  ಮಾತನಾಡಿ, ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಜ. 30 ರಿಂದ ಫೆಬ್ರವರಿ 13ರ ವರೆಗೆ ಜಿಲ್ಲೆಯಾ ದ್ಯಂತ ಹಮ್ಮಿಕೊಳ್ಳಲಾಗಿದ್ದು, ಸಮುದಾಯ ಹಾಗೂ ವಿವಿಧ ಇಲಾಖೆಗಳ ಸಹಕಾರ ತುಂಬಾ ಅವಶ್ಯಕತೆ ಇದ್ದು, ಈ ಕಾರ್ಯ ಕ್ರಮಕ್ಕೆ ಸಹಕರಿಸಬೇಕು ಎಂದು ಹೇಳಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲಾಧಿಕಾರಿ ಡಾ.ಪದ್ಮಾನಂದ ಎ. ಗಾಯಕವಾಡ ಮಾತನಾಡಿ, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿಯ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂ ಡು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಕುಷ್ಠ ರೋಗದ ಬಗ್ಗೆ ಭಯ ಬೇಡ ಜಾಗೃತಿ ಇರಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಎಂಓ ಡಾ.ಅನಿಲ ಕುಮಾರ ತಾಳಿ ಕೋಟಿ, ಆರ್‌ಸಿಹೆಚ್‌ಓ ಡಾ.ಮಲ್ಲಪ್ಪ, ಎಫ್‌ಡಬ್ಲೂö್ಯಓ ಡಾ.ಜೋತಿ ಕಟ್ಟಿಮನಿ, ಟಿಹೆಚ್‌ಓ ಡಾ.ಹಣಮಂತರೆಡ್ಡಿ, ಡಿಹೆಚ್‌ಇಓ (ಪ್ರಭಾರಿ) ತುಳಸಿರಾಮ ಚವ್ಹಾಣ, ಡಿಪಿಎಮ್ ಮನೋಹರ ಪಾಟೀಲ್,  ಡಾ.ಸುನಿತಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವೀರನಗೌಡ, ಹಾಗೂ ಅಧಿಕಾರಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!