ಡಿಸೆಂಬರ್ 25ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ | ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಗಣ್ಯರು ಭಾಗಿ

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2025-2028 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಡಿಸೆಂಬರ್ 25 ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 12.30ಕ್ಕೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಮತ್ತು ಶಾಸಕ ಶರಣಗೌಡ ಕಂದಕೂರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ದಿಕ್ಸೂಚಿ ಭಾಷಣ ಮಾಡುವರು. ಶ್ರೀ ಚರಬಸವೇಶ್ವರ ಸಂಸ್ಥಾನದ ಶರಣಬಸವ ಗದ್ದುಗೆ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ. ವೆಂಕಟಸಿಂಗ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಕೆಯುಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.‌ಲೋಕೇಶ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸರಡ್ಡಿ ಅನಪೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ‌ ಮಾನೇಗಾರ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ, ಜೆಡಿಎಸ್ ನಗರ ಘಟಕ ಅಧ್ಯಕ್ಷ ಬಂದಪ್ಪ ಅರಳಿ, ಕೆಯುಡಬ್ಲ್ಯೂಜೆ ರಾಜ್ಯ ಉಪಾಧ್ಯಕ್ಷ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಮತ್ತಿಕೆರೆ ಜಯರಾಮ್, ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ, ಅತಿಥಿಗಳಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಲಿಂಗೇರಿ, ಸಂಘದ ರಾಜ್ಯ ಪರಿಷತ್ತಿನ ಸದಸ್ಯ ಸಾಗರ್ ದೇಸಾಯಿ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ ನರಸಪ್ಪ ನಾರಾಯಣೋರ್ ಅವರನ್ನು ಇದೇ ವೇಳೆ ಸನ್ಮಾನಿಸಲಾಗುವುದು. ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸುವ ಮೂಲಕ ಪತ್ರಕರ್ತರು ಮತ್ತು ಜಿಲ್ಲೆಯ ಸಾರ್ವಜನಿಕರು ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!