ಪತ್ರಕರ್ತರ ಸಾಧಕ ಮಕ್ಕಳಿಗೆ ಪ್ರೋತ್ಸಾಹ| ಸಂಘದ ಕಾರ್ಯ ಶ್ಲಾಘನೀಯ

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಮಕ್ಕಳ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜಿಲ್ಲಾ ಪತ್ರಿಕಾ ಭವನದಲ್ಲಿ ಮೇ 18 ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಬೆಳಿಗ್ಗೆ 10ಕ್ಕೆ ನಡೆಯುವ ಕಾರ್ಯಕ್ರಮವನ್ನು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಉದ್ಘಾಟಿಸಲಿ ದ್ದಾರೆ. ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಅವರು ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ವಿತರಣೆ ಮಾಡುವರು. ಮುಖ್ಯ ಅತಿಥಿಗಳಾಗಿ ನಗರಸಭೆ ಸದಸ್ಯ ಚನ್ನಕೇಶವಗೌಡ ಬಾಣತಿಹಾಳ ಮತ್ತು ಜೆಡಿಎಸ್ ನಗರ ಘಟಕ ಅಧ್ಯಕ್ಷ ಬಂದಪ್ಪ ಅರಳಿ, ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ಜಿಲ್ಲಾ ಉಸ್ತುವಾರಿ ಭವಾನಿಸಿಂಗ್ ಠಾಕೂರು, ಸಂಘದ ರಾಜ್ಯ ಪರಿಷತ್ತಿನ ಸದಸ್ಯ ರಾಘವೇಂದ್ರ ಕಾಮನಟಗಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಕಲಾಲ್ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

2024-25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆದಿತ್ಯ ಧೀರೇಂದ್ರ ಕುಲಕರ್ಣಿ, ರಿಷಿಕಾ ಶ್ರೀಮಂತ ಚಲವಾದಿ, ಅರ್ಪಿತ್ ಪ್ರಶಾಂತ್ ರಾಠಿ, ಅನಘಾ ಪವನ ಕುಲಕರ್ಣಿ, ಸಮೃದ್ದಿ ಸಿದ್ದಯ್ಯ ಪಾಟೀಲ್, ಸಿದ್ದಲಿಂಗೇಶ ಗವಿಸಿದ್ದೇಶ ಹೊಗರಿ, ಸುಮನ್ ಅಮರೇಶ್ ಹಿರೇಮಠ, ಸಂಜನಾ ಶಿವಣ್ಣ ಚಿನ್ನಾಕಾರ ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ತಲಾ 5 ಸಾವಿರ ರೂಪಾಯಿ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

Spread the love

Leave a Reply

Your email address will not be published. Required fields are marked *

error: Content is protected !!