ಸೇವಾ ಮನೋಭಾವ ದೊಂದಿಗೆ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಕಾರ್ಯನಿರ್ವಹಿಸಿ – ಪಿ.ಕೆ.ಉಮೇಶ
ಯಾದಗಿರಿ : ಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ಸ್ಪಂದಿಸಿ ಅನಗತ್ಯ ಕಾಲಹರಣ ಮಾಡದೇ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಯಾದಗಿರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಪಿ.ಕೆ ಉಮೇಶ ಅವರು ಹೇಳಿದರು.
ಇಲ್ಲಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಲೋಕಾಯುಕ್ತ ಯಾದಗಿರಿ ವತಿಯಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
2024ರ “Say No To Corruption; Commit to the Nation”ಧ್ಯೇಯ ವಾಕ್ಯದೊಂದಿಗೆ ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ ಆಚರಣೆ ಹಿನ್ನೆಲೆ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.
ಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಈ ಕಛೇರಿಯು ಜನಸಾಮಾನ್ಯರ ಕಛೇರಿಯಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯು ಒಂದಿಲ್ಲೊಂದು ಕಾರಣಕ್ಕಾಗಿ ತಹಸೀಲ್ದಾರರ ಕಛೇರಿಗೆ ಸಂರ್ಪಕಿಸಬೇಕಾಗುತ್ತದೆ ಕಾರಣ ಪ್ರತಿ ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ಸ್ಪಂದಿಸಲು ಸೂಚಿಸಲಾಯಿತು.
ಹಿರಿಯ ಉಪನೋಂದಣಾಧಿಕಾರಿಗಳ ಕಾರ್ಯಲಯಕ್ಕೆ ಭೇಟಿ ನೀಡಿ ಸದರಿ ಕಛೇರಿಯಲ್ಲಿ ಹಾಜರಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ “ಭ್ರಷ್ಟಾಚಾರ ವಿರುದ್ಧ ಅರಿವು ಸಪ್ತಾಹ ಪ್ರತಿಜ್ಞಾವಿಧಿ ಭೋಧನೆ ಮಾಡಿಸಲಾಯಿತು.
ಅನಗತ್ಯ ಕಾಲಹರಣ ಮಾಡದೇ ನಿಗಧಿತ ಅವಧಿಯಲ್ಲಿ ಸೇವೆ ನೀಡಲು ಹಾಗೂ ಭ್ರಷ್ಟಾಚಾರ ಮುಕ್ತ ಪದ್ದತಿಯನ್ನು ಮೈಗೂಡಿಸಿಕೊಳ್ಳಬೇಕು. ಕಛೇರಿಗೆ ಬರುವ ಸಾರ್ವಜನಿಕರಿ ತೊಂದರೆ ಯಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಯಿತು. ಈ ಸಂದರ್ಭದಲ್ಲಿ ಯಾದಗಿರಿ ತಹಸೀಲ್ದಾರರಾದ ಸುರೇಶ ಅಂಕಲಗಿ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.