ರಾಜ್ಯಾಧ್ಯಕ್ಷ ಬಿ. ನರಸಪ್ಪ ರಿಂದ ನೇಮಕ ಆದೇಶ | ಸಕ್ರೀಯ ಹೋರಾಟದ ಶ್ರಮಕ್ಕೆ ಫಲ
ಯಾದಗಿರಿ: ಬೆಂಗಳೂರುನಲ್ಲಿ ಮಾದಿಗ ದಂಡೋರ MRPS ರಾಜ್ಯಾದ್ಯಕ್ಷ ಬಿ. ನರಸಪ್ಪ ದಂಡೋರ ಅವರು ಕಾಶಪ್ಪ ಹೆಗ್ಗಣ್ಣಗೇರಾರನ್ನು ಸಮಿತಿ ನೂತನ ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಶಪ್ಪ ಹೆಗ್ಗಣಗೇರಾ ಈ ಹಿಂದೆ ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಮೂರು ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ನಾಯಕ ಪದ್ಮಶ್ರೀ ಮಂದಕೃಷ್ಣ ಮಾದಿಗ ರವರ ನಾಯಕತ್ವದಲ್ಲಿ ಸಮಿತಿ ಮಾರ್ಗದರ್ಶನ ಒಳ ಮೀಸಲಾತಿ ಹೋರಾಟದಲ್ಲಿ ಸಕ್ರಿಯವಾಗಿ ಶ್ರಮಿಸಿದ್ದರು.
ಯಾದಗಿರಿ ಜಿಲ್ಲೆಯಲ್ಲಿ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ಧ್ವನಿಯೆತ್ತಿ ನೊಂದ ಕುಟುಂಬಗಳಿಗೆ ನ್ಯಾಯ ಕೊಡಿಸುವಲ್ಲಿ ಪ್ರಾಮಾಣಿಕತೆ ಹೋರಾಡಿದ್ದಾರೆ.
ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಿ ಹಲವು ಹೋರಾಟ ನಡೆಸಿದ ಸಾಮಾಜಿಕ ಕಾಳಜಿ ಗುರುತಿಸಿ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
