ಯಾದಗಿರಿ: ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಉತ್ತಮವಾಗಿ ಆಡಳಿತ ನೀಡುತ್ತಿರುವ ಪರಿಣಾಮವಾಗಿ ಅವರ ರಾಜಕೀಯ ಏಳ್ಗೆಯನ್ನು ಸಹಿಸಿಕೊಳ್ಳಲು ವಿರೋಧಿಗಳಿಗೆ ಆಗುತ್ತಿಲ್ಲ. ಹೀಗಾಗಿ ಸುಳ್ಳು ಆರೋಪ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಗತ್ಯವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಭೀಮಣ್ಣ ಮೇಟಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಅವರ ಸಾಕಷ್ಟು ಹಗರಣಗಳನ್ನು ಪ್ರಿಯಾಂಕ್ ಖರ್ಗೆ ಅವರು ಬಯಲಿಗೆ ಎಳೆದಿದ್ದಾರೆ. ಬಿಜೆಪಿಗೆ ತೀಕ್ಷಣವಾದ ಉತ್ತರವನ್ನು ನೀಡಿದ್ದಾರೆ. ಇದನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.
ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರಣರ ಎಂದು ರಾಜಕೀಯವಾಗಿ ತೇಜೋವಧೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಇವರ ಷಢ್ಯಂತ್ರಕ್ಕೆ ರಾಜ್ಯದ ಜನರು ಮುಂದಿನ ದಿನಗಳಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಪ್ರತಿಪಕ್ಷವಾಗಿ ಬಿಜೆಪಿ ಸೈದ್ಧಾಂತಿಕವಾಗಿ ಹೋರಾಟ ಮಾಡುವುದು ಬಿಟ್ಟು ಸಮಾಜದಲ್ಲಿ ಕಂದಕ ಸೃಷ್ಟಿಸುವಂತಹ ಕೆಲಸ ಮಾಡುತ್ತಿದೆ. ಹೀಗಾಗಿಯೇ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನ ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಜನಪರವಾದ ಆಡಳಿತ ನೀಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರಿಗೆ ಮಾತ್ರ ಇದು ಸಹಿಸಿಕೊಳ್ಳಲು ಅಗುತ್ತಿಲ್ಲ. ಹೀಗಾಗಿಯೇ ಕುತಂತ್ರವಾದ ರಾಜಕೀಯ ಮಾಡುತ್ತಿದ್ದಾರೆ. ಇದು ಎಂದಿಗೂ ಫಲಿಸುವುದಿಲ್ಲ ಎಂದಿದ್ದಾರೆ.