ಯಾದಗಿರಿ : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ನವೆಂಬರ್ 30 ಹಾಗೂ ಡಿಸೆಂಬರ್ 1, 2, 3 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ತಿಳಿಸಿದ್ದಾರೆ.
2024ರ ನವೆಂಬರ್ 30ರ ಶನಿವಾರ ರಂದು ಬೆಳಿಗ್ಗೆ 8 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ 9.30 ಗಂಟೆಗೆ ಯಾದಗಿರಿ ಆಗಮಿಸಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸಲಿದ್ದಾರೆ.
ಡಿ. 1ರ ಭಾನುವಾರ ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ವರೆಗೆ ಕಲಬುರಗಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಆಲಿಸುವರು ಹಾಗೂ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿಸೆಂಬರ್ 2ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ 10.30 ಗಂಟೆಗೆ ಯಾದಗಿರಿ ಆಗಮಿಸಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಪ್ರೌಢ ಶಾಲಾ ಬಾಲಕ, ಬಾಲಕಿಯರ ಥ್ರೋಬಾಲ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಮಧ್ಯಾಹ್ನ 12 ಗಂಟೆಗೆ ಶಹಾಪೂರ ನಗರದಲ್ಲಿ ಬಿ.ಸಿ.ಎಂ.ವಸತಿ ನಿಲಯದಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳ ನಿಲಯದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ತದನಂತರ ಮಧ್ಯಾಹ್ನ 1 ಗಂಟೆದಿಂದ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಆಲಿಸುವರು. ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
ಡಿ.3 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ 10.30 ಗಂಟೆಗೆ ಯಾದಗಿರಿ ಆಗಮಿಸಿ ನಗರದ ಸರಕಾರಿ ಪದವಿ ಮಹಾವಿದ್ಯಾಲಯ ದಿ.ವಿಶ್ವನಾಥರೆಡ್ಡಿ ಮುದ್ನಾಳ ಸಭಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಬೆಳಿಗ್ಗೆ 11.30 ಗಂಟೆಗೆ ಶಹಾಪೂರ ನಗರದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ನಾಲಾಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಅಡಿಗಲ್ಲು ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸುವರು. ತದನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
4 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ 11.30 ಗಂಟೆಗೆ ಯಾದಗಿರಿ ಆಗಮಿಸಿ ನಗರದ ಪೊಲೀಸ್ ಠಾಣೆಯ ನೂತನ ಕಟ್ಟಡ ಮತ್ತು ವಸತಿ ಗೃಹಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಆಲಿಸುವರು. ತದನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.