ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಲಹಳ್ಳಿಯಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

ಯಾದಗಿರಿ:  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಈ ವಾತ್ಸಲ್ಯ ಮನೆ ನಿರ್ಮಾಣ ಮಾಡಿ ಸಮಾಜದಲ್ಲಿ ಅಶಕ್ತರಿಗೆ ಒಂದು ಶಕ್ತಿಯಾಗಿ ಅವರ ಬೆನ್ನಲೆಬುಲಾಗಿದೆ ಎಂದು ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಹೇಳಿದರು.

ತಾಲೂಕಿನ ಮಾಧವಾರ ವಲಯದ ನೀಲಹಳ್ಳಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಶಕ್ತರ ಬೆನ್ನ ಹಿಂದೆ ನಿಂತು ಅವರ ಬಾಳಿನ ಬೆಳಕಾಗಿ ಅವರ ಬದುಕನ್ನೇ ಬದಲಾವಣೆಯ ನಿಟ್ಟಿನಲ್ಲಿ ಕರೆದೊಯ್ಯುತ್ತಿರುವ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಕಾರ್ಯ ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದರು.

ಯೋಜನಾಧಿಕಾರಿ ಮಂಜುನಾಥ ಎಚ್ ಮಾತನಾಡಿ, ಫಲಾನುಭವಿ ಸಾಬಮ್ಮ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸು ಆಗಿದೆ ಎಂದರು.

ಕಲ್ಯಾಣ ಕರ್ನಾಟಕದ ಗಡಿ ಭಾಗದಲ್ಲಿ ಕಳೆದ ಎಂಟು ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಲವಾರು ಸಮುದಾಯ ಅಭಿವೃದ್ಧಿ, ಆರ್ಥಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕಳಕಳಿಯ ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಭಾಗದಲ್ಲಿ ಬಹಳ ಯಶಸ್ವಿಯಾಗಿ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀನಿವಾಸ್ ಹಾಗೂ ಒಕ್ಕೂಟ ಅಧ್ಯಕ್ಷೆ ನಿರ್ಮಲಾ, ವಲಯದ ಮೇಲ್ವಿಚಾರಕ ಶಿವಕುಮಾರ್, ರಂಗಮ್ಮ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕು.ಲಕ್ಶ್ಮೀ, ಸ್ಥಳೀಯ ಸೇವಾ ಪ್ರತಿನಿಧಿ ಅನಿತಾ ಹಾಗೂ ಒಕ್ಕೂಟ ಪದಾಧಿಕಾರಿಗಳು ಸಂಘದ ಸದಸ್ಯರು, ಗ್ರಾಮದ ಯುವಕರು, ಶೌರ್ಯ ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!