ಪ.ಜಾ, ಪ.ಪಂ ದೌರ್ಜನ್ಯ ನಿಯಂತ್ರಣ ಕಾಯ್ದೆ | ಜಿಲ್ಲಾ ಜಾಗೃತಿ ಸಮಿತಿ ಸಭೆ
ಯಾದಗಿರಿ : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಮೇಲೆ ಅತಿ ಹೆಚ್ಚು ದೌರ್ಜನ್ಯ ನಡೆಯುವಂತಹ ಗ್ರಾಮಗಳ ಪಟ್ಟಿಯನ್ನು ಇಟ್ಟುಕೊಂಡು, ಕಾಲಕಾಲಕ್ಕೆ ಭೇಟಿ ನೀಡಿ ಅಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಇತ್ತೀಚೆಗೆ ಪ.ಜಾ, ಪ.ಪಂ ದೌರ್ಜನ್ಯ ನಿಯಂತ್ರಣ ಕಾಯ್ದೆ 1995ರ ನಿಯಮ 17ರ ರೀತ್ಯ ಜಿಲ್ಲಾ ಜಾಗೃತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಸತಿ ನಿಲಯಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ , ದೌರ್ಜನ್ಯಕ್ಕೆ ನೊಂದ ಸಂತ್ರಸ್ತರಿಗೆ ತಕ್ಷಣ ಪರಿಹಾರ ದೊರಕಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೌರ್ಜನ್ಯಕ್ಕೆ ನೊಂದ ಶಹಾಪೂರ ನಗರದ 3 ಸಂತ್ರಸ್ತರಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು. ಜಿಲ್ಲೆಯ ವಿವಿಧ ಕಡೆಗಳಲ್ಲಿ ಎಸ್ ಸಿ. ಎಸ್ ಟಿ ಜನಾಂಗಕ್ಕೆ ಸ್ಮಶಾನಭೂಮಿ ಅವಶ್ಯಕತೆ ಇರುವಲ್ಲಿ ತಕ್ಷಣ ಸಂಬಂಧ ಪಟ್ಟ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಬೇಕು.
ಜನಸಂಖ್ಯೆ ಆಧಾರದ ಮೇಲೆ ಸ್ಮಶಾನಭೂಮಿ ಒದಗಿಸುವ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದ ಅವರು ವಿವಿಧ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.
ಯಾದಗಿರಿ ಜಿಲ್ಲೆಯಲ್ಲಿ ನಡೆದ ದೌರ್ಜನ್ಯ ಪ್ರಕರಣಗಳಿಗೆ ಸಂಬಂ ಧಪಟ್ಟಂತೆ 2024ರ ಜುಲೈ 14ರ ರಿಂದ 2025ರ ಜನವರಿ 9ರ ವರೆಗಿನ ಅವಧಿಯಲ್ಲಿ ನೊಂದ ಸಂತ್ರಸ್ತರಿಗೆ ಒಟ್ಟು ₹46 ಲಕ್ಷ ರೂ.ಗಳ ಪರಿಹಾರ ಧನವನ್ನು ಜಿಲ್ಲಾಡಳಿತದಿಂದ ವಿತರಿಸಲಾಗಿ ದೆ ಎಂದು ತಿಳಿಸಿದ್ದಾರೆ.
ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಅವಧಿಯಲ್ಲಿ ಪರಿಹಾರ ವಿತರಿಸಲು ಒಟ್ಟು 1.20 ಕೋ.ರೂ ಗಳ ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದೆ. ಬಾಕಿ ಉಳಿದ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿ ತು. ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರ ಪ್ರಶ್ನೆಗೆ ಜಿಲ್ಲಾಡಳಿತ ಕಛೇರಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು.
ಸುರಪುರ ನಗರಸಭೆ ಪೌರಾಯುಕ್ತ ಜೀವನ ಕುಮಾರ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಎಚ್ಚರಿಸಿದರು.
ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ವ್ಯಾಪ್ತಿಯಲ್ಲಿ ಭೂ ಒಡೆತನ ಯೋಜನೆಯಡಿ ಸೌಲಭ್ಯ ಕಲ್ಪಿಸಬೇಕು. ಈ ಜನಾಂಗ ಕ್ಕಾಗಿ ಸಾರ್ವಜನಿಕ ಸ್ಮಶಾನಭೂಮಿ ಸೌಲಭ್ಯ ಗುರುತಿಸುವ ಜೊತೆಗೆ ಪ್ರಸ್ತಾವನೆ ಸಲ್ಲಿಸಲು, ವಿವಿಧ ನಿಗಮಗಳ ವ್ಯಾಪ್ತಿಯಲ್ಲಿ ಈ ಜನಾಂಗಕ್ಕಾಗಿ ನೀಡಲಾಗುವ ಸಾಲಕ್ಕಾಗಿ ಅನಗತ್ಯ ದಾಖಲಾ ತಿ ಕೇಳದಂತೆ ಹಾಗೂ ಸ್ಮಶಾನ ಭೂಮಿ ಒತ್ತುವರಿಯಾಗಿರುವ ಬಗ್ಗೆ ಪರಿಶೀಲಿಸಿ ತಕ್ಷಣ ತೆರವು ಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸುರಪುರ ನಗರಸಭೆ ವ್ಯಾಪ್ತಿಯಲ್ಲಿ ನಗರದ ವಾರ್ಡ್ 29 ರಲ್ಲಿ ಸ್ಮಶಾನ ಭೂಮಿ ಪರಿಶೀಲಿಸಿ ಮಂಜೂರು ಮಾಡಲು ಸುರಪುರ ನಗರಸಭೆ ಪೌರಾಯುಕ್ತ ಜೀವನಕುಮಾರಗೆ ಸೂಚಿಸಿದರು.
ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಮಾತನಾಡಿ,, ಸುರಪುರ ತಾಲೂಕಿನಲ್ಲಿ ದೌರ್ಜನ್ಯ ಪ್ರಕರಣ ಕುರಿತು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಿ ಕ್ರಮ ಕೈಗೊಳ್ಳುತ್ತಿದೆ. ಯಾದಗಿರಿ ಜಿಲ್ಲೆಯಾದ್ಯಂತ ಪ್ರಸ್ತುತ ದೌರ್ಜನ್ಯ ಪ್ರಕರಣ 10 ತನಿಖೆಯಲ್ಲಿವೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳಿಗೆ ಸ್ಪಂದಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಎಸ್.ಎಸ್ ಚನ್ನಬಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವೀರನಗೌಡ, ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವೆಗಳು ಉಪ ನಿರ್ದೇಶಕರು ರಾಜು ದೇಖಮುಖ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸುರಪುರ ನಗರಸಭೆ ಪೌರಾಯುಕ್ತರು ಜೀವನಕುಮಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.