ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ. ಕುಮಾರ ನಾಯಕ ಸಭೆ
ಯಾದಗಿರಿ: ರೈತರು ಕೇವಲ ಕೃಷಿಗೆ ಸೀಮಿತವಾಗದೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆ ಅವರಿಗೆ ಸಲಹೆಗಳನ್ನು ನೀಡಿ, ಆರ್ಥಿಕವಾಗಿ ಸಧೃಡರಾಗಲು ಪ್ರೇರೇಪಿಸಬೇಕು ಎಂದು ಅಧಿಕಾರಿಗಳಿಗೆ ರಾಯಚೂರು ಸಂಸದ ಜಿ.ಕುಮಾರ ನಾಯಕ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ, ಜಿಲ್ಲೆಯ ಕೃಷಿ, ಹೈನುಗಾರಿಕೆ, ರೇಷ್ಮೆ ಮತ್ತು ಮೀನುಗಾರಿಕೆಯ ಸಂಬಂಧಪಟ್ಟಂತಹ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಿಗುವಂತಹ ಸಾಲ ಸೌಲಭ್ಯಗಳು ಯೋಜನೆಗಳ ಕುರಿತು ಸರಿಯಾದ ಮಾಹಿತಿ ನೀಡಿ ರೈತರ ಆರ್ಥಿಕತೆಯನ್ನು ಹೆಚ್ಚಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ರೈತರ ಆರ್ಥಿಕತೆ ಹಾಗೂ ಬೆಳವಣಿಗೆಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.