ಯಾದಗಿರಿ: ನ.7 ರಂದು ತಾಲೂಕಿನ ಸೈದಾಪುರದಲ್ಲಿ ಅಕ್ರಮ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ.
ಸೀತಾರಾಮ್ ಅಲಿಯಾಸ್ ಸಿದ್ದಪ್ಪ ಚವ್ಹಾಣ ಎಂಬುವವರ ಟೀನ ಶೆಡ್ ಮೇಲೆ ಸಿಬ್ಬಂದಿಯೊಂದಿಗೆ ದಾಳಿ ಮಾಡಿದಾಗ ಅಕ್ರಮವಾಗಿ ಮಾರಾಟದ ಉದ್ದೇಶದಿಂದ ಸಂಗ್ರಹಿಸಿ ಇಟ್ಟಿದ್ದ 80 ಲೀಟರ್ ಕಲಬೆರಕೆ ಸೇಂದಿ ಪತ್ತೆಯಾಗಿದ್ದು ವಶಪಡಿಸಿಕೊಂಡಿದ್ದಾರೆ.
3 ಜನ ಆರೋಪಿತರ ವಿರುದ್ಧ ಘೋರ ಪ್ರಕರಣವನ್ನು ಅಬಕಾರಿ ನಿರೀಕ್ಷಕರು ವಿಭಾಗ ಶಹಾಪುರ ಅವರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ಅಪರಾಧ) ಕೇಂದ್ರ ಸ್ಥಾನ ಬೆಳಗಾವಿ ರವರ ನಿರ್ದೇಶನ, ಅಬಕಾರಿ ಜಂಟಿ ಆಯುಕ್ತರು (ಜಾ ಮತ್ತು ತ) ಕಲಬುರಗಿ ವಿಭಾಗ, ಅಬಕಾರಿ ಉಪ ಆಯುಕ್ತರು ಯಾದಗಿರಿ ಮಾರ್ಗದರ್ಶನದಲ್ಲಿ ಹಾಗೂ ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ ಶಹಾಪುರ್ ನೇತೃತ್ವದಲ್ಲಿ ದಾಳಿ ನಡೆದಿದೆ.