ಯಾದಗಿರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಸೆ.17ರಿಂದ ಅಕ್ಟೋಬರ್ 2 ಮಹಾತ್ಮ ಗಾಂಧಿ ಜನ್ಮ ದಿನದವರೆಗೆ ದೇಶದಾದ್ಯಂತ ಸೇವಾ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಭಾಗಿವಹಿಸಿ ಯಶಸ್ವಿಗೊಳಿಸಬೇಕು ಬಿಜೆಪಿ ರಾಜ್ಯ ಮಾಜಿ ಕಾರ್ಯದರ್ಶಿ ಜಗದೀಶ ಹೀರೆಮನಿ ಎಂದು ಹೇಳಿದರು.
ನಗರದ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸೇವಾ ಪಾಕ್ಸಿಕ್ ಅಭಿಯಾನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ಸೇವಾ ಪಾಕ್ಷಿಕ ಅಭಿಯಾನದ ಅವಧಿಯಲ್ಲಿ ವಿವಿಧ ಸೇವಾ ಚಟುವಟಿಗಳ ಮೂಲಕ ದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವುದು ನಮ್ಮ ಉದ್ದೇಶವಾಗಿದೆ. ಕಳೆದ ವರ್ಷದ ರೀತಿಯಲ್ಲಿಯೇ ಈ ವರ್ಷವೂ ಅಭಿಯಾನವನ್ನು ಅರ್ಥಪೂರ್ಣವಾಗಿ ನಡೆಸಬೇಕು ಎಂದು ತಿಳಿಸಿದರು.
ದೇಶದ್ಯಾದ್ಯಂತ ಏಕಕಾಲದಲ್ಲಿ ಆರಂಭವಾಗುವ ಅಭಿಯಾನದಲ್ಲಿ ಕೇಂದ್ರ ಸಚಿವರು, ಸಂಸದರು, ಪಕ್ಷದ ಶಾಸಕರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಅಭಿಯಾನದಲ್ಲಿ ಭಾಗವಹಿಸುವ ರೀತಿಯಲ್ಲಿ ಕಾರ್ಯಕ್ರಮ ರೂಪಿಸಬೇಕು ಎಂದರು..
ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಪಕ್ಷದ ಸಂಘಟನಾತ್ಮಕ ಕೆಲಸ ಕಾರ್ಯಗಳಲ್ಲಿ ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಹಿರಿಯ ಮುಖಂಡೆ ನಾಗರತ್ನ ಕುಪ್ಪಿ, ಸಿದ್ದಣ್ಣ ಗೌಡ ಕಾಡನೊಂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ ಹಾಗೂ ಮೆಲಪ್ಪ ಗುಳಗಿ, ರಾಜುಗೌಡ ಉಕ್ಕನಾಳ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೆರ, ನಗರಸಭೆ ಮಾಜಿ ಅಧ್ಯಕ್ಷ ಸುರೇಶ್ ಅಂಬಿಗೇರ, ಗೋವಿಂದಪ್ಪ ಖಾನಾಪುರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
