ನ.21 ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ | ಡಿಸೆಂಬರ್ 8 ರಂದು ಮತದಾನ ಪ್ರಕ್ರಿಯೆ
ಯಾದಗಿರಿ : ರಾಜ್ಯ ಚುನಾವಣಾ ಆಯೋಗವು 2023ರ-ಡಿಸೆಂಬರ್ ಮಾಹೆಯಿಂದ 2025ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ವೇಳಾ ಪಟ್ಟಿಯನ್ನು ಪ್ರಕಟಿಸಿದೆ.
ಯಾದಗಿರಿ ಜಿಲ್ಲೆಯಲ್ಲಿ ಶೋರಾಪುರ ತಾಲ್ಲೂಕಿನಲ್ಲಿ 17-ಕರಡಕಲ್ ಮತ್ತು 18 – ಕಿರದಳ್ಳಿ ಗ್ರಾಮ ಪಂಚಾಯತಿಗಳಿಗೆ 21 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ವೇಳಾಪಟ್ಟಿ ನಿಗದಿಪಡಿಸಿದೆ ಎಂದು ಯಾದಗಿರಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ತಿಳಿಸಿದ್ದಾರೆ
ಗ್ರಾಮ ಪಂಚಾಯತಿಗಳಲ್ಲಿ ಚುನಾವಣೆ ನಡೆಯುವ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು 2024ರ ನವೆಂಬರ್ 21 ರಿಂದ 2024ರ ಡಿಸೆಂಬರ್ 11ರ ವರೆಗೆ ಜಾರಿಯಲ್ಲಿರುತ್ತದೆ.
ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಿದ್ದು, 2024ರ ನವೆಂಬರ್ 21ರ ಗುರುವಾರ ರಿಂದ 27ರ ಬುಧವಾರ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. 2024ರ ನವೆಂಬರ್ 28ರ ಗುರುವಾರ ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ಅಂದೇ ಕ್ರಮಬದ್ಧ ಅರ್ಹ ಅಭ್ಯರ್ಥಿಗಳ ಪ್ರಕಟಣೆ ಹೊರಡಿಸಲಾಗುತ್ತದೆ. ಉಮೇದುವಾರಿಕೆ ಹಿಂಪಡೆಯಲು 2024ರ ನವೆಂಬರ್ 30ರ ಶನಿವಾರ ವರೆಗೆ ಅವಕಾಶವಿರುತ್ತದೆ.
ಚುನಾವಣೆಯ ಮತದಾನವು 2024ರ ಡಿಸೆಂಬರ್ 8ರ ಭಾನುವಾರ ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯ ವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ 2024ರ ಡಿಸೆಂಬರ್ 10ರ ಮಂಗಳವಾರ ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಮತಗಳ ಎಣಿಕೆ 2024ರ ಡಿಸೆಂಬರ್ 11ರ ಬುಧವಾರ ರಂದು ಬೆಳಿಗ್ಗೆ 8 ಗಂಟೆಯಿAದ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಅಂದೇ ಫಲಿತಾಂಶ ಘೋಷಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.