ಯಾದಗಿರಿ: ಪ್ರವಾಸೋದ್ಯಮ ಇಲಾಖೆಯಿಂದ ಪ್ರಸಕ್ತ 2024-25ನೇ ಸಾಲಿನ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಪ್ರವಾಸೋದ್ಯಮ/ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಕಾರ್ಯಕ್ರ ಮ ರೂಪಿಸಿದ್ದು, ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ರಾಜ್ಯದಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಸಂಸ್ಥೆಗಳಲ್ಲಿ ವಸತಿ ಸಹಿತ ತರಬೇತಿ ನೀಡಲು ಉದ್ದೇಶಿಸಲಾಗಿರುತ್ತದೆ.
ತರಬೇತಿ ಪಡೆಯಲು ಆಸಕ್ತಿ ಇರುವ ಅರ್ಹ ಎಸ್.ಸಿ-ಎಸ್.ಟಿ. ಅಭ್ಯರ್ಥಿಗಳು ಸಹಾಯಕ ನಿರ್ದೇಶಕರ ಕಾರ್ಯಾಲಯ, ಪ್ರವಾಸೋದ್ಯಮ ಇಲಾಖೆ, ಎ-16, ಎ-ಬ್ಲಾಕ್, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ ಯಾದಗಿರಿ-585202 ಇಲ್ಲಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಇದೇ ಕಚೇರಿಗೆ ಇದೇ ಡಿಸೆಂಬರ್ 28ರ ಸಂಜೆ 4.30 ಗಂಟೆ ವರೆಗೆ ಸಲ್ಲಿಸಬೇಕು. ಅವಧಿ ಮೀರಿ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಯಾದಗಿರಿ ಜಿಲ್ಲಾಧಿ ಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಡಾ.ಸುಶೀಲಾ ಬಿ. ತಿಳಿಸಿದ್ದಾರೆ.
ತರಬೇತಿ ಕಾರ್ಯಕ್ರಮಗಳ ವಿವರ:15 ವಾರಗಳ ಅವಧಿಯ ಫುಡ್ ಬೆವರೇಜ್ ಸರ್ವಿಸ್ ಸ್ಟೀವಾರ್ಡ್ ತರಬೇತಿಗೆ 10ನೇ ತರಗತಿ, 15 ವಾರಗಳ ಅವಧಿಯ ರೂಮ್ ಅಟೆಂಡೆಂಟ್ ತರಬೇತಿಗೆ 5ನೇ ತರಗತಿ ಹಾಗೂ 16 ವಾರಗಳ ಅವಧಿಯ ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿಗೆ 12ನೇ ತರಗತಿ ಹಾಗೂ 20 ವಾರಗಳ ಅವಧಿಯ ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ 8ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಸತಿ ಸಹಿತ ಈ ಎಲ್ಲಾ ತರಬೇತಿಗೆ ಅರ್ಜಿ ಸಲ್ಲಿಸಬಯಸುವವ ರು 20 ರಿಂದ 45 ವರ್ಷ ವಯೋಮಾನದ ವರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಜಿಲ್ಲಾಡಳಿತ ಭವನದಲ್ಲಿರುವ ಪ್ರವಾಸೋದ್ಯಮ ಇಲಾಖೆ ಕಚೇರಿ ಮತ್ತು ದೂ.ಸಂ.08473-253011ಕ್ಕೆ ಸಂಪರ್ಕಿಸಬಹುದಾಗಿದೆ.