ಅನಪುರ ಗ್ರಾಮಕ್ಕೆ ಸಿಇಓ ಭೇಟಿ | ನಾಲಾ ಹೂಳೆತ್ತುವ ಕಾಮಗಾರಿ ಪರಿಶೀಲನೆ

ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಾಡಿಯಾ ಹಾಗೂ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಸಿಬಿ ದೇವರಮನಿ ಭೇಟಿ ನೀಡಿದರು.

ಅನುಪುರ ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ತಮ್ಮ ಕೈಯಾರೆ ಆಹಾರ ಬಡಿಸಿದರು. ನಂತರ  ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿ ಸೇರಿದಂತೆ ಇನ್ನಿತರ ವಿಷಯಗಳ ಮಾಹಿತಿ ಪಡೆದರು.

ಅನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಸಾಲವಾಯಿ ಗ್ರಾಮದಲ್ಲಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿಗೆ ಭೇಟಿ ನೀಡಿ ವೀಕ್ಷಿಸಿದರು. ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಗುರುಮಠಕಲ್ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ್ ಪಾಟೀಲ್, ಮನರೇಗಾ ತಾಲೂಕು ಸಹಾಯಕ ನಿರ್ದೇಶಕ ರಾಮಚಂದ್ರ ಬಸೂದೆ, ಪಿಡಿಓ ಹನುಮಂತರೆಡ್ಡಿ, ತಾಂತ್ರಿಕ ಸಹಾಯಕ ವಿಜಯಕುಮಾರ್ ತಾಂತ್ರಿಕ ಸಂಯೋಜಕ ಮುಸಾಮಿಲ್ ಮತ್ತು ಪಂಚಾಯಿತಿ ಸಿಬ್ಬಂದಿಗಳು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!