ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜುಬಿನ್ | ಹಿಂದೆ ರಾಯಚೂರು ನಗರ ಪಾಲಿಕೆ ಆಯುಕ್ತರಾಗಿ ಸೇವೆ

ಯಾದಗಿರಿ: ಜಿಲ್ಲೆಯ ನೂತನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡ ಜುಬಿನ್  ಮೊಹಾಪಾತ್ರ ಅವರಿಗೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಅಧಿಕಾರ ಹಸ್ತಾಂತರಿಸಿದರು.

ಯಾದಗಿರಿ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ, ಅಧಿಕಾರಿ ಸ್ವೀಕರಿಸಿದ ಜುಬಿನ್ ಮೊಹಾಪಾತ್ರ ಅವರು ಕರ್ನಾಟಕ ಕೇಡರ್‌ಗೆ ಸೇರಿದ, 2021ನೇ ಬ್ಯಾಚ್‌ನ ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಪ್ರಸ್ತುತ ಇವರು ಯಾದಗಿರಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇದಕ್ಕೂ ಮೊದಲು ಅವರು ಆಯುಕ್ತರಾಗಿ ಮತ್ತು ಹಿರಿಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!